ಮಾದಿಗ ಸಮುದಾಯಕ್ಕೆ ಹೊಸ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡಲು ಕ್ರಮ : ಆಹಾರ ಸಚಿವ ಕೆಹೆಚ್. ಮುನಿಯಪ್ಪ.
ಜಿಲ್ಲಾ ಸುದ್ದಿ


ದಾವಣಗೆರೆ : ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಇಂದು ದಾವಣಗೆರೆಯ ಪರಿವೀಕ್ಷಣಾ ಮಂದಿರದಲ್ಲಿ ಜಿಲ್ಲಾ ಮಟ್ಟದ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದರು.
ಜಿಲ್ಲೆಯಲ್ಲಿ ಒಟ್ಟು 4 ಲಕ್ಷ ಪಡಿತರ ಕಾರ್ಡ್ ಗಳಿದ್ದು ಸುಮಾರು 15 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳಿಗೆ ಪಡಿತರ ವಿತರಿಸಲಾಗುತ್ತಿದ್ದು ಜಿಲ್ಲೆಯಲ್ಲಿ 729 ನ್ಯಾಯಬೆಲೆ ಅಂಗಡಿಗಳನ್ನು ಹೊಂದಿದ್ದು, ಒಳ ಮೀಸಲಾತಿ ಅಡಿಯಲ್ಲಿ ಪರಿಶಿಷ್ಟ ಜಾತಿಯ ಮಾದಿಗ ಸಮುದಾಯಕ್ಕೆ ಹೊಸ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದರು.
ಅಕ್ರಮವಾಗಿ ಹೊಂದಿರುವ ಅನರ್ಹ ಪಡಿತರ ಕಾರ್ಡುಗಳನ್ನು ಪತ್ತೆ ಹಚ್ಚುವುದರೊಂದಿಗೆ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳಿಗೆ ಪಡಿತರ ಕಾರ್ಡ್ ವಿತರಿಸಲು ಕ್ರಮ ವಹಿಸುತ್ತಿದ್ದು ತಾವು ಅರ್ಹರನ್ನು ಗುರುತಿಸಲು ಸೂಚನೆ ನೀಡಿದರು.
ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿಗಳು ತೂಕ ಮತ್ತು ಅಳತೆಯ ಗುಣಮಟ್ಟವನ್ನು ಕಾಪಾಡುವಕಡೆ ಗಮನವಹಿಸಿ ಪೆಟ್ರೋಲ್ ಬಂಕ್ ಗಳಲ್ಲಿ ನಾಗರಿಕರಿಗೆ ಯಾವುದೇ ಮೋಸವಾಗದಾಗೆ ನಿಗಾವಹಿಸಬೇಕು ಹಾಗೆಯೇ ಅಂಗಡಿಗಳಲ್ಲಿ ತೂಕದ ಮೆಷಿನ್ ಗಳನ್ನು ತಪಾಸಣೆ ಮಾಡಿ ಸತ್ಯಾಪಣ ಮತ್ತು ಮುದ್ರೆಯ ಮಾಡಿ ಪ್ರಮಾಣಪತ್ರ ವಿತರಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಜಂಟಿ ಉಪ ನಿರ್ದೇಶಕರಾದ ಮಧು ಸೂದನ್ ಹಾಗೂ ಕಾನೂನು ಮಾಪನ ಇಲಾಖೆಯ ಸಹಾಯಕ ನಿಯಂತ್ರಕ ವೆಂಕಟೇಶ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾ ಭಾರತ್ ನ್ಯೂಸ್ ವೆಬ್ ಪೋರ್ಟಲ್ ವಾಟ್ಸಪ್ ಗ್ರೂಪ್ ಸೇರಲು 👇👇Follow this link to join my WhatsApp group : https://chat.whatsapp.com/Fj6L4Eak7N994zl2QHSpHK