ಆನೇಕಲ್: ಆಟವಾಡುತ್ತಿದ್ದಾಗ ವಿದ್ಯುತ್ ತಂತಿ ತಗುಲಿ 11 ವರ್ಷದ ಬಾಲಕಿ ಸಾವು.
ಜಿಲ್ಲಾ ಸುದ್ದಿಕ್ರೈಮ್ಸ್ಥಳೀಯ ಸುದ್ದಿ


ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನಾರಾಯಣಘಟ್ಟದಲ್ಲಿ ಧಾರಣ ಘಟನೆ ನಡೆದಿದ್ದು, ಆಟವಾಡ್ತಿದ್ದಾಗ ವಿದ್ಯುತ್ ಶಾಕ್ ತಗುಲಿ 11 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ನಡೆದಿದೆ.
ಸಂಪಂಗಿ ಮತ್ತು ಮಂಜುಳಾ ದಂಪತಿ ಪುತ್ರಿ ತನಿಷ್ಕ, ಇಲ್ಲಿನ ವಿಸ್ಮಯ ಶಾಲೆಯಲ್ಲಿ ಓದುತ್ತಿದ್ದಳು. ಇಂದು ಶಾಲೆ ರಜೆ ಇದ್ದ ಕಾರಣ ಬಾಲಕಿ ಮನೆಯಲ್ಲಿದ್ದಳು. ವಿದ್ಯುತ್ ಕಂಬದ ಬಳಿ ಆಟವಾಡುತ್ತಿದ್ದಾಗ ಕರೆಂಟ್ ಶಾಕ್ ತಗುಲಿ ಈ ದುರ್ಘಟನೆ ಸಂಭವಿಸಿದೆ.
ವಿದ್ಯುತ್ ಶಾಕ್‌ನಿಂದ ಗಾಯಗೊಂಡಿದ್ದ ತನಿಷ್ಕಾಳನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.
ಇದರಿಂದ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಆಸ್ಪತ್ರೆ ಮುಂಭಾಗ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಸೂರ್ಯ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.