ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ

ಸ್ಥಳೀಯ ಸುದ್ದಿಜಿಲ್ಲಾ ಸುದ್ದಿ

ಧರ್ಮ ಬಸವನಪುರ.

8/28/20251 min read

ಬೆಂ.ಗ್ರಾ.ಜಿಲ್ಲೆ : ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲು ಅರ್ಜಿ ಆಹ್ವಾನಿಸಲಾಗಿದೆ.

ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿಯ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ (FCI) ಹಾಗೂ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ (IHM) ಬೆಂಗಳೂರು ರವರ ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ.

ತರಬೇತಿ ಹಂತದಲ್ಲಿ ಒದಗಿಸುವ ಸೌಲಭ್ಯಗಳು :

ಈಗಾಗಲೇ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್ ಗಳಲ್ಲಿ ಕೆಲಸ ಕಾತರಿಯಾಗಿರುವುದು.ಮಹೆಯಾನ ಅಭ್ಯರ್ಥಿಗಳಿಗೆ ತರಬೇತಿ ಪಡೆಯುವ ವೇಳೆ ರೂ.2000/- ಗಳು ತರಬೇತಿ ಭತ್ಯೆ ನೀಡಲಾಗುವುದು.

ತರಬೇತಿಗೆ ಹಾಜರಾಗುವವರಿಗೆ ವಸತಿ, ಊಟ ಹಾಗೂ ಸಮವಸ್ತ್ರ ನೀಡಲಾಗುವುದು.

ತರಬೇತಿ ಜೊತೆಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್ ಗಳಲ್ಲಿ ಕೆಲಸದ ನೈಜ ಅನುಭವ ಸಹ ನೀಡಲಾಗುವುದು.

IHM,ಬೆಂಗಳೂರು ಹಾಗೂ FCI ಮೈಸೂರು ಸಂಸ್ಥೆಗಳು ಪ್ರತಿಷ್ಠಿತ ಆತಿಥ್ಯ ಕ್ಷೇತ್ರದಲ್ಲಿ ತರಬೇತಿ ನೀಡುವ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾಗಿದ್ದು, ಈ ಸಂಸ್ಥೆಗಳಿಂದ ತರಬೇತಿ ನೀಡಿ ಪ್ರಮಾಣ ಪತ್ರ ನೀಡುವುದರಿಂದ ರಾಜ್ಯದೊಳಗೆ ಅಲ್ಲದೇ ದೇಶದ ಯಾವುದೇ ಭಾಗದ ಹೋಟೆಲ್ ಉದ್ಯಮದಲ್ಲಿ ಕೆಲಸ ಖಾತರಿಯಾಗುವುದು.

Food and Beverage Service Steward ಈ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 4 ತಿಂಗಳ ತರಬೇತಿಯಿದ್ದು, ಹತ್ತನೇ ತರಗತಿ ಉತ್ತೀರ್ಣವಾಗಿರಬೇಕು, 20 ರಿಂದ 45 ರ ವಯಸ್ಸಿನವರಾಗಿರಬೇಕು.

ಕೊಠಡಿ ಪರಿಚಾರಕ (Room Attendant) ಈ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 4 ತಿಂಗಳ ತರಬೇತಿಯಿದ್ದು, ಐದನೇ ತರಗತಿ ಉತ್ತೀರ್ಣರಾಗಿರಬೇಕು, 20 ರಿಂದ 45 ರ ವಯಸ್ಸಿನವರಾಗಿರಬೇಕು.

ಮುಂಭಾಗದ ಕಛೇರಿಯ ಸಹಾಯಕ (Front Office Associate) ಈ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 4 ತಿಂಗಳ ತರಬೇತಿಯಿದ್ದು, ದ್ವಿತೀಯ ಪಿಯುಸಿ ಪಾಸಾಗಿರಬೇಕು, 20 ರಿಂದ 45 ರ ವಯಸ್ಸಿನವರಾಗಿರಬೇಕು.

ಬಹು ಪಾಕಪದ್ಧತಿ ಅಡುಗೆ (Multi Cuisine Cook) ಈ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 5 ತಿಂಗಳ ತರಬೇತಿಯಿದ್ದು, 8ನೇ ತರಗತಿ ಉತ್ತೀರ್ಣವಾಗಿರಬೇಕು, 20 ರಿಂದ 45 ರ ವಯಸ್ಸಿನವರಾಗಿರಬೇಕು.

ತರಬೇತಿ ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 10 ರಂದು ಸಂಜೆ 5:30 ರೊಳಗೆ ಕಚೇರಿಯ ಸಮಯದಲ್ಲಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ, ಕೊಠಡಿ ಸಂಖ್ಯೆ:09 ನೆಲ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂರವಾಣಿ ಸಂಖ್ಯೆ:080-22040633 ಇವರನ್ನು ಕಚೇರಿಯ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾ ಭಾರತ್ ನ್ಯೂಸ್ ವೆಬ್ ಪೋರ್ಟಲ್ ವಾಟ್ಸಪ್ ಗ್ರೂಪ್ ಸೇರಲು 👇👇Follow this link to join my WhatsApp group : https://chat.whatsapp.com/Fj6L4Eak7N994zl2QHSpHK