ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಸ್ಥಳೀಯ ಸುದ್ದಿ

ಧರ್ಮ ಬಸವನಪುರ.

9/24/20251 min read

ಬೆಂ.ಗ್ರಾ ಜಿಲ್ಲೆ : ಜಿಲ್ಲೆಯಲ್ಲಿ 2025-26ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ವಿಪ್ರ ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಯಲ್ಲಿ ಹಸು ಸಾಕಾಣಿಕೆ, ಗುಡಿ ಮತ್ತು ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಲು ಗರಿಷ್ಠ ರೂ,2 ಲಕ್ಷ ಗಳನ್ನು ನೀಡಲಾಗುವುದು.

ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದವರಾಗಿದ್ದು ಆರ್ಥಿಕವಾಗಿ ಹಿಂದುಳಿದ ಪ್ರಮಾಣ ಪತ್ರವನ್ನು (EWS) ಹೊಂದಿರಬೇಕು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು, 18-65 ವರ್ಷದ ಒಳಗಿರಬೇಕು. ಒಂದು ಕುಟುಂಬದಿಂದ ಒಬ್ಬರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಮಹಿಳೆಯರಿಗೆ ಶೇ.33% ಹಾಗೂ ದಿವ್ಯಾಂಗರಿಗೆ ಶೆ.5% ಮೀಸಲಾತಿಯಿದೆ. ಅರ್ಜಿದಾರರು ಆಧಾರ್ ಕಾರ್ಡ್ ಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಿರಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಸೀಡ್ ಆಗಿರಬೇಕು.

ಅರ್ಹ ಫಲಾನುಭವಿಗಳು ಅರ್ಜಿಯನ್ನು ಅನ್ ಲೈನ್ ಮೂಲಕ ಅಧಿಕೃತ ಜಾಲತಾಣ www.ksbdb.Karnataka.gov.in ಗೆ ಅಕ್ಟೋಬರ್ 31ರ ಸಂಜೆ 5 ಗಂಟೆಯೊಳಗೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಕೊಠಡಿ ಸಂಖ್ಯೆ:132, ಜಿಲ್ಲಾಡಳಿತ ಭವನ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.