ಕರ್ನಾಟಕ ಭೋವಿ ಅಭಿವೃದ್ಧಿ ನಿಗಮಗದಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಸ್ಥಳೀಯ ಸುದ್ದಿಜಿಲ್ಲಾ ಸುದ್ದಿ


ಬೆಂ.ಗ್ರಾಂ: ಜಿಲ್ಲೆಯಲ್ಲಿ 2025-26ನೇ ಸಾಲಿಗೆ ಸಂಬಂಧಿಸಿದಂತೆ ಆರ್ಥಿಕವಾಗಿ ಹಿಂದುಳಿದ ವರ್ಗದ ಅಭಿವೃದ್ದಿಗಾಗಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮಗದಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಕುರಿ ಸಾಕಾಣಿಕೆ ಯೋಜನೆ (ಕಿರು ಆರ್ಥಿಕ ಚಟುವಟಿಕೆಗಳಿಗೆ)ಮತ್ತು ನೇರ ಸಾಲ ಯೋಜನೆ (ಸಹಾಯಧನ ಗರಿಷ್ಠ ರೂ,2 ಲಕ್ಷ). ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಲ್ಲಿ ಹೈನುಗಾರಿಕೆ (ಸಹಾಯಧನ ಗರಿಷ್ಠ ರೂ, 1.25 ಲಕ್ಷ), ಫಾಸ್ಟ್ ಫುಡ್ ಟ್ರಕ್, ಟ್ರೈಲರ್/ ಮೊಬೈಲ್ ಕಿಚನ್ ಫುಡ್ ಕಿಯೋಸ್ಟ್ (ಸಹಾಯಧನ ಗರಿಷ್ಠ ರೂ, 4 ಲಕ್ಷ), ಸ್ವಾವಲಂಭಿ ಸಾರಥಿ ಯೋಜನೆ (ಸರಕು ವಾಹನ/ಟ್ಯಾಕ್ಸಿ ಹಳದಿ ಬೋರ್ಡ್, ಸಹಾಯಧನ ಗರಿಷ್ಠ ರೂ,4 ಲಕ್ಷ). ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆಯಡಿ ಮಹಿಳಾ ಸ್ವ ಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ. ಭೂ ಒಡೆತನ ಯೋಜನೆಯಡಿ ಭೂ ರಹಿತ ಮಹಿಳಾ ಕಾರ್ಮಿಕರಿಗೆ ಭೂಮಿಯನ್ನು ಖರೀದಿಸಲು ಸಹಾಯಧನ. ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸುವ ಸೌಲಭ್ಯ.
ಅರ್ಹ ಫಲಾನುಭವಿಗಳು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯದವರು ಅರ್ಜಿಗಳನ್ನು ನೇರವಾಗಿ ಅನ್ ಲೈನ್ ಮೂಲಕ ಅಧಿಕೃತ ಜಾಲತಾಣವಾದ https://sevasindhu.karnataka.gov.in ನಲ್ಲಿ ಅಥವಾ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಗಳಲ್ಲಿ ಅರ್ಜಿಯನ್ನು ಸೆಪ್ಟೆಂಬರ್ 10 ರೊಳಗೆ ಸಲ್ಲಿಸಬೇಕು. 2023-24 ಮತ್ತು 2024-25ನೇ ಸಾಲಿನಲ್ಲಿ ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ ಅಥವಾ ಆಯಾ ತಾಲ್ಲೂಕು ಅಭಿವೃದ್ಧಿ ಅಧಿಕಾರಿಗಳನ್ನು ದೇವನಹಳ್ಳಿ - 8050854019, ದೊಡ್ಡಬಳ್ಳಾಪುರ - 8050854020, ಹೊಸಕೋಟೆ - 8050854021, ನೆಲಮಂಗಲ - 8050854022 ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾ ಭಾರತ್ ನ್ಯೂಸ್ ವೆಬ್ ಪೋರ್ಟಲ್ ವಾಟ್ಸಪ್ ಗ್ರೂಪ್ ಸೇರಲು 👇👇Follow this link to join my WhatsApp group : https://chat.whatsapp.com/Fj6L4Eak7N994zl2QHSpHK