ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಸ್ಥಳೀಯ ಸುದ್ದಿಜಿಲ್ಲಾ ಸುದ್ದಿ


ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2025-26 ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದವರಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸುತ್ತಿದ್ದು, ಅರ್ಹ ಫಲಾನುಭವಿಗಳಿಂದ ನಿಗಮದ ಅಧಿಕೃತ ತಂತ್ರಾಂಶದ ಮೂಲಕ ಆನ್‌ಲೈನ್ ಅರ್ಜಿಯನ್ನು ಆಹ್ವಾನಿಸಲಾಗಿದೆ.
ನಿಗಮದಿಂದ ಶ್ರಮಶಕ್ತಿ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ವಿದೇಶಿ ವ್ಯಾಸಂಗಕ್ಕಾಗಿ ಸಾಲ ಯೋಜನೆ, ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ಯೋಜನೆ, ಸಾಂತ್ವನ ಯೋಜನೆ, ವ್ಯಾಪಾರ/ ಉದ್ಯಮಗಳಿಗೆ ನೇರ ಸಾಲ ಯೋಜನೆ ಸೇರಿ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಫಲಾನುಭವಿಗಳು ನಿಗಮದ ವೆಬ್ಸೈಟ್: www.kmdconline.karnataka.gov.in ನಲ್ಲಿ ಅರ್ಜಿ ಸಲ್ಲಿಸಲು ಅಕ್ಟೋಬರ್ 16 ಕೊನೆಯ ದಿನವಾಗಿದೆ.
ಹೆಚ್ಚಿನ ವಿವರ ಹಾಗೂ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ನಂ. 19, 1ನೇ ಮಹಡಿ D.N ಮಂಜುನಾಥ ಕಾಂಪ್ಲೆಕ್ಸ್, ಹೊಸಬಸ್ ನಿಲ್ದಾಣ ಹಿಂಭಾಗ, ಯಲಹಂಕ ಬೀದಿ, ದೇವನಹಳ್ಳಿ ಟೌನ್ ದೂ.ಸಂ: 27681786 ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.