ಪೆಟ್ರೋಲ್ ಸುರಿದು 'ATM' ಮಷೀನ್ ಕಳ್ಳತನಕ್ಕೆ ಯತ್ನ..!
ಕ್ರೈಮ್ಜಿಲ್ಲಾ ಸುದ್ದಿ


ದಾವಣಗೆರೆ: ಪೆಟ್ರೋಲ್ ಸುರಿದು ಎಟಿಎಂ ಒಡೆಯಲು ಖದೀಮರು ಮುಂದಾಗಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಬಳಿಕ ಪರಾರಿಯಾದ ಘಟನೆ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ಕಳೆದ ಮಧ್ಯರಾತ್ರಿ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕಳ್ಳರು ಮಧ್ಯರಾತ್ರಿ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರಕ್ಕೆ ನುಗ್ಗಿದ್ದಾರೆ. ಮೊದಲು ಕಬ್ಬಿಣದ ಸರಳು ಬಳಸಿ ಎಟಿಎಂ ಒಡೆಯಲು ಯತ್ನಿಸಿದ್ದಾರೆ. ಅದು ಸಾಧ್ಯವಾಗದೇ ಇದ್ದಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ದಟ್ಟ ಹೊಗೆ ಆವರಿಸುತ್ತಿದ್ದಂತೆ ಎಸ್ಕೇಪ್ ಆಗಿದ್ದಾರೆ.
ಸ್ಥಳಕ್ಕೆ ಧಾವಿಸಿದ ಬಿಳಿಚೋಡು ಪೊಲೀಸರು ಬೆಂಕಿಯ ನಂದಿಸಿದ್ದಾರೆ. ಎಟಿಎಂನಲ್ಲಿದ್ದ ನೋಟುಗಳಿಗೆ ಯಾವುದೇ ಹಾನಿ ಉಂಟಾಗಿಲ್ಲ ಎಂದು ಗೊತ್ತಾಗಿದೆ. ಸಿಸಿಟಿವಿಯಲ್ಲಿ ಒಬ್ಬನೇ ಕಳ್ಳತನಕ್ಕೆ ಪ್ರಯತ್ನಿಸಿರುವುದು ಕಂಡು ಬಂದಿದೆ. ಬಿಳಿಚೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶ್ವಾನದಳ, ಬೆರಳಚ್ಚು ಸಿಬ್ಬಂದಿ ಹಾಗೂ ಸಿಪಿಐ ನಾಗರಾಜ್, ಎಸ್.ಐ. ರಮೇಶ್ ನೇತೃತ್ವದಲ್ಲಿ ಪೊಲೀಸರು ಪರಿಶೀಲಿಸಿದರು.