ದೊಡ್ಡಬಳ್ಳಾಪುರ ಬಸ್​ನಿಲ್ದಾಣಕ್ಕೆ ಖಾಸಗಿ ಬಸ್ ಗಳ ಪ್ರವೇಶಕ್ಕೆ ನಿಷೇಧ, ಬಸ್ ಮಾಲೀಕರು ಮತ್ತು ಕಾರ್ಮಿಕರ ಸಂಘದಿಂದ ಪ್ರತಿಭಟನೆ

ಸ್ಥಳೀಯ ಸುದ್ದಿ

ರಾಘವೇಂದ್ರ ಹೆಚ್.ಎ

7/5/20251 min read

ದೊಡ್ಡಬಳ್ಳಾಪುರ : ನಗರದ ಕೊಂಗಾಡಿಯಪ್ಪ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಗಳ ಪ್ರವೇಶಕ್ಕೆ ನಿಷೇಧಿಸಲಾಗಿದ್ದು, ಖಾಸಗಿ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಗಳಿಗೆ ಮಾತ್ರ ಅವಕಾಶ ನೀಡಲಾಗಿದೆ, ಇದು ಖಾಸಗಿ ಬಸ್ ಮಾಲೀಕರ ಅಕ್ರೋಶಕ್ಕೆ ಕಾರಣವಾಗಿದ್ದು, ಬಸ್ ನಿಲ್ದಾಣದಲ್ಲಿ ಇಂದು ಪ್ರತಿಭಟನೆ ನಡೆಸಿದರು.

ದೊಡ್ಡಬಳ್ಳಾಪುರ ನಗರದ ಶ್ರೀಕೊಂಗಾಡಿಯಪ್ಪ ಬಸ್ ನಿಲ್ದಾಣ ಖಾಸಗಿ ಬಸ್ ಗಳ ನಿಲ್ದಾಣವಾಗಿದ್ದು, ದೊಡ್ಡಬಳ್ಳಾಪುರ ಸುತ್ತಮುತ್ತಲಿನ ಊರುಗಳಿಗೆ ಇಲ್ಲಿಂದ ಖಾಸಗಿ ಬಸ್ ಗಳು ಸಂಚಾರಿಸುತ್ತಿದ್ದವು, ಇದೇ ನಿಲ್ದಾಣ ನಂಬಿ 112 ಖಾಸಗಿ ಬಸ್ ಗಳ ಮಾಲೀಕರು ಮತ್ತು ಕಾರ್ಮಿಕರು ಜೀವನ ನಡೆಸುತ್ತಿದ್ದರು, ಇದೇ ಸ್ಥಳದಲ್ಲಿ ಬಿಎಂಟಿಸಿ ಬಸ್ ನಿಲ್ದಾಣದ ಬೋರ್ಡ್ ಹಾಕಲಾಗಿದ್ದು, ಖಾಸಗಿ ವಾಹನಗಳ ಅತಿಕ್ರಮ ಪ್ರವೇಶ ನಿಷೇಧಿಸಲಾಗಿರುವ ಬೋರ್ಡ್ ಹಾಕಲಾಗಿದೆ, ಏಕಾಏಕಿ ಹಾಕಲಾಗಿರುವ ಬೋರ್ಡ್​ ಖಾಸಗಿ ಬಸ್ ಮಾಲೀಕ ಮತ್ತು ಕಾರ್ಮಿಕರ ಅಕ್ರೋಶಕ್ಕೆ ಕಾರಣವಾಗಿದೆ.

ದೊಡ್ಡಬಳ್ಳಾಪುರ ನಗರಸಭೆಯ ಏಕಾಎಕಿ ನಿರ್ಧಾರವನ್ನ ಖಂಡಿಸಿ ಖಾಸಗಿ ಬಸ್ ಮಾಲೀಕರು ಮತ್ತು ಕಾರ್ಮಿಕರ ಸಂಘ ಶ್ರೀಕೊಂಗಾಡಿಯಪ್ಪ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು, ಖಾಸಗಿ ವಾಹನಗಳ ನಿಲುಗಡೆ ಮಾಡದಂತೆ ನಾಮಫಲಕ ಅಳವಡಿಸಿದ್ದು ಕೂಡಲೇ ನಗರಸಭೆ ಈ ನಾಮಫಲಕವನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿದರು.                                                                                                    

ಪ್ರಜಾ ಭಾರತ್ ನ್ಯೂಸ್ ವೆಬ್ ಪೋರ್ಟಲ್ ವಾಟ್ಸಪ್ ಗ್ರೂಪ್ ಸೇರಲು 👇👇Follow this link to join my WhatsApp group: https://chat.whatsapp.com/Fj6L4Eak7N994zl2QHSpHK