ಬೆಂಗಳೂರು ಗ್ರಾಮಾಂತರ ಇನ್ಮುಂದೆ ಬೆಂಗಳೂರು ಉತ್ತರ ಜಿಲ್ಲೆ: ಹೆಸರು ಬದಲಾವಣೆಗೆ ಸಚಿವ ಸಂಪುಟ ಅನುಮೋದನೆ

ಜಿಲ್ಲಾ ಸುದ್ದಿ

ರಾಘವೇಂದ್ರ ಹೆಚ್.ಎ

7/2/20251 min read

ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಬುಧವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಇಂದು ನಂದಿ ಗಿರಿಧಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯನ್ನು ಭಾಗ್ಯನಗರ ಎಂದು ಮರು ನಾಮಕರಣ ಮಾಡಲು ಅನುಮೋದನೆ ನೀಡಲಾಗಿದೆ.

ಈಗಾಗಲೇ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲಾಗಿದೆ. ಇದೀಗ ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ತಾಲ್ಲೂಕುಗಳನ್ನೊಳಗೊಂಡ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣ ಮಾಡಲಾಗಿದೆ.

ಇನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣಕ್ಕೆ ಭಾಗ್ಯನಗರ ಎಂದು ಹೆಸರಿಡಬೇಕು ಎಂದು ಸ್ಥಳೀಯ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಬಗ್ಗೆ ಇಂದು ಸಂಪುಟದಲ್ಲಿ ಚರ್ಚಿಸಿ, ಅನುಮೋದನೆ ನೀಡಿದ್ದು, ಬಾಗೇಪಲ್ಲಿ ಇನ್ಮುಂದೆ ’ಭಾಗ್ಯನಗರ’ ಎಂದು ಬದಲಾಗಲಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಮರುನಾಮಕರಣ ಗೊಳಿಸಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರಿಗೆ ಶುಭಾಶಯ ಕೋರಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆಹೆಚ್. ಮುನಿಯಪ್ಪ.

ಪ್ರಜಾ ಭಾರತ್ ನ್ಯೂಸ್ ವೆಬ್ ಪೋರ್ಟಲ್ ವಾಟ್ಸಪ್ ಗ್ರೂಪ್ ಸೇರಲು 👇👇Follow this link to join my WhatsApp group: https://chat.whatsapp.com/Fj6L4Eak7N994zl2QHSpHK