ಕನ್ನಮಂಗಲ ಗ್ರಾ.ಪಂ.ಗೆ ನೂತನ ಅಧ್ಯಕ್ಷರಾಗಿ ಬೆಳತ್ತೂರು ಯಲ್ಲಪ್ಪ ಅವಿರೋಧ ಆಯ್ಕೆ.
ಸ್ಥಳೀಯ ಸುದ್ದಿ


ಮಹದೇವಪುರ: ಬೆಂಗಳೂರು ಪೂರ್ವ ತಾಲ್ಲೂಕಿನ ಕನ್ನಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕಾಗಿ ಸೋಮವಾರ ನಡೆದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಯಲ್ಲಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಗ್ರಾಮ ಪಂಚಾಯಿತಿ ಸದಸ್ಯರು ಮಾಜಿ ಅಧ್ಯಕ್ಷೆ ಪವಿತ್ರ ರವಿ ವಿರುದ್ಧ ಅವಿಶ್ವಾಸ ನಿರ್ಣಯ ಕೈಗೊಂಡ ಹಿನ್ನೆಲೆ ತೆರವಾಗಿದ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆದಿತ್ತು.
16 ಸದಸ್ಯರನ್ನು ಒಳಗೊಂಡಿರುವ ಕನ್ನಮಂಗಲ ಗ್ರಾಮ ಪಂಚಾಯಿತಿಯಲ್ಲಿ ಸಮಾನ್ಯ ವರ್ಗಕ್ಕೆ ಮೀಸಲಿಟ್ಟ ಅಧ್ಯಕ್ಷ ಸ್ಥಾನ ಚುನಾವಣೆಗೆ ಯಲ್ಲಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಗೋವಿಂದಪ್ಪ ತಿಳಿಸಿದರು.
ನೂತನ ಗ್ರಾ.ಪಂ ಅಧ್ಯಕ್ಷ ಯಲ್ಲಪ್ಪ ಮಾತನಾಡಿ ಇರುವ ಅಲ್ಪ ಸಮಯದಲ್ಲಿ ಗ್ರಾಮಗಳ ಅಭಿವದ್ಧಿ ವಿಷಯದಲ್ಲಿ ಜಾತಿ ಬೇಧ, ಪಕ್ಷ ಬೇಧ ಮರೆತು ಎಲ್ಲಾ ಸದಸ್ಯರನ್ನು ಒಗ್ಗೂಡಿಸಿಕೊಂಡು ಕೆಲಸ ಮಾಡಲಾಗುವುದು ಎಂದು ತಿಳಿಸಿದರು. ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸಾರ್ವಜನಿಕಕರಿಗೆ ಸಿಗಬೇಕಾದ ಎಲ್ಲ ರೀತಿಯ ಸೌಲಭ್ಯಗಳು ಹಾಗೂ ಬಡವರಿಗೆ ಸಿಗಬೇಕಾದ ಅನುಕೂಲಗಳನ್ನು ಪ್ರಾಮಾಣಿಕವಾಗಿ ಒದಗಿಸಲು ಶಕ್ತಿ ಮೀರಿ ಶ್ರಮಿಸುವುದಾಗಿ ತಿಳಿಸಿದರು.
ಕನ್ನಮಂಗಲ ಗ್ರಾಮ ಪಂಚಾಯಿತಿಗೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷರಾದ ಯಲ್ಲಪ್ಪರವರನ್ನು ಪಕ್ಷಾತೀತವಾಗಿ ಅಭಿನಂದಿಸಿದರು.
ಈ ಸಂಧರ್ಭದಲ್ಲಿ ಉಪಾಧ್ಯಕ್ಷ ಚೈತ್ರಾ, ಗ್ರಾಮ ಪಂಚಾಯತಿ ಸದಸ್ಯರಾದ ಜಯಮ್ಮ ಎಲ್, ಸೋಮಶೇಖರ್, ಮಂಗಳ ಶ್ರೀಧರ್, ಕೃಷ್ಣಮೂರ್ತಿ, ಮಂಜುನಾಥ್, ನಿರ್ಮಲಾ, ದಾಕ್ಷಯಣಿ , ನೇತ್ರಾ, ವಿಜಯಮ್ಮ ಸೇರಿದಂತೆ ಮುಖಂಡರು ಭಾಗವಹಿಸಿದ್ದರು.