ಹಸುವಿಗೆ ಮೇವನ್ನು ತರಲು ಹೋಗುತ್ತಿದ್ದ ಮಹಿಳೆಯರಿಗೆ ಕಾರು ಡಿಕ್ಕಿ..! ಸ್ಥಳದಲ್ಲೇ ಇಬ್ಬರ ದುರ್ಮರಣ.

ಕ್ರೈಮ್ಸ್ಥಳೀಯ ಸುದ್ದಿ

ಧರ್ಮ ಬಸವನಪುರ.

6/25/20251 min read

ದೇವನಹಳ್ಳಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಮಹಿಳೆಯರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ತಾಲೂಕಿನ ಬೊಮ್ಮವಾರ ಗ್ರಾಮದಲ್ಲಿ ನಡೆದಿದೆ.

ಯಶೋಧ( 33) ತಿಮ್ಮಕ್ಕ.( 60) ಅಪಘಾತದಲ್ಲಿ ಮೃತ ಪಟ್ಟ ದುರ್ದೈವಿಗಳಾಗಿದ್ದಾರೆ.

ಬೊಮ್ಮವಾರ ಗ್ರಾಮದ ಇಬ್ಬರು ಮಹಿಳೆಯರು ಜಾನುವಾರುಗಳಿಗೆ ಹುಲ್ಲು ತರಲು ಹೋಗಿದ್ದ ವೇಳೆ ರಸ್ತೆ ಎಡ ಭಾಗದದಲ್ಲಿ ನಡೆದು ಹೋಗುತ್ತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಇಬ್ಬರು ಮಹಿಳೆಯರ ಮೇಲೆ ಹರಿದು, ಪಕ್ಕದಲ್ಲಿದ್ದ ಗೋಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಪಟ್ಟವರನ್ನೇ ನಂಬಿ ಜೀವನ ನಡೆಸುತ್ತಿದ್ದ ಕುಟುಂಬಸ್ಥರು ಬೀದಿ ಪಾಲಾಗಿದ್ದು,ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.