ಬೆಂಗಳೂರು: ಬ್ಯಾಗ್‌ನಲ್ಲಿ ನವಜಾತ ಹೆಣ್ಣು ಶಿಶು ಪತ್ತೆ.

ಸ್ಥಳೀಯ ಸುದ್ದಿಜಿಲ್ಲಾ ಸುದ್ದಿ

ಧರ್ಮ ಬಸವನಪುರ.

9/9/20251 min read

ಆನೇಕಲ್ : ಗಿಡಗಳ ಪೊದೆಯಲ್ಲಿ ಕಂದಮ್ಮವೊಂದು ಅಳು ಕೇಳಿ ಸಾರ್ವಜನಿಕರು ಗಾಬರಿಯಾಗಿದ್ದರು. ಜೋರಾಗಿ ಮಗು ಅಳುತ್ತಿರುವುದನ್ನು ನೋಡಿ ಸ್ಥಳೀಯರು ಹುಡುಕಿದಾಗ ಪೊದೆಗಳ ನಡುವೆ ನವಜಾತ ಶಿಶು ಪತ್ತೆಯಾಗಿದೆ. ಬೆಂಗಳೂರು ಹೊರವಲಯದ ಚಂದಾಪುರ ಚೋಳರ ಕೆರೆಏರಿ ಸಮೀಪ ಈ ಘಟನೆ ಬೆಳಕಿಗೆ ಬಂದಿದೆ.

ಮಗುವಿನ ಅಳುವಿನ ಶಬ್ದ ಕೇಳಿಸಿಕೊಂಡು ಹುಡುಕಿದಾಗ ಬಟ್ಟೆಯಲ್ಲಿ ಸುತ್ತಿ ಬ್ಯಾಗ್‌ನೊಳಗೆ ಇಟ್ಟು ಹೋಗಿದ್ದ ನವಜಾತ ಶಿಶುವನ್ನು ಕಂಡು ಬೆಚ್ಚಿಬಿದ್ದರು. ಕೂಡಲೇ ಶಿಶುವನ್ನು ಹತ್ತಿರದ ಚಂದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆಗೆದುಕೊಂಡು ಹೋಗಲಾಯಿತು.

ಆರೋಗ್ಯ ಕೇಂದ್ರದ ಸಿಬ್ಬಂದಿಗಳು ತಕ್ಷಣ ಶಿಶುವಿಗೆ ಅಗತ್ಯ ಆರೈಕೆ ನೀಡಿದರು. ವೈದ್ಯರ ಪ್ರಕಾರ, ಶಿಶುವಿಗೆ ಮೆಕೋನಿಯಮ್ ಸ್ಟೈನ್ ಸಮಸ್ಯೆ ಇತ್ತು.ತಕ್ಷಣದ ಚಿಕಿತ್ಸೆಯ ನಂತರ ಶಿಶುವಿನ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಪ್ರಸ್ತುತ ಮಗು ಹಾಲು ಸೇವನೆ ಮಾಡುತ್ತಿದೆ ಹಾಗೂ ಸ್ಥಿತಿ ಸ್ಥಿರವಾಗಿದೆ. ಹೆಚ್ಚಿನ ತಜ್ಞರ ಚಿಕಿತ್ಸೆಗೆ ಶಿಶುವನ್ನು ಬೆಂಗಳೂರು ನಗರದ ವಾಣಿ ವಿಲಾಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಪ್ರಕರಣ ಕುರಿತು ಸೂರ್ಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶಿಶುವನ್ನು ಬಿಟ್ಟುಹೋದವರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ಸಮೀಪದ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ, ಸ್ಥಳೀಯರಿಂದ ಮಾಹಿತಿ ಸಂಗ್ರಹಣೆ ನಡೆಯುತ್ತಿದೆ.