ಇಂದು ಬೆಸ್ಕಾಂ ಗ್ರಾಹಕರ ಕುಂದು ಕೊರತೆ ಸಭೆ
ಸ್ಥಳೀಯ ಸುದ್ದಿ


ದೊಡ್ಡಬಳ್ಳಾಪುರ ನಗರ ಉಪವಿಭಾಗ ವ್ಯಾಪ್ತಿಗೆ ಬರುವ ಗ್ರಾಹಕರ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ವಿಷಯವಾಗಿ ಗ್ರಾಹಕರ ಕುಂದುಕೊರತೆ ಸಭೆಯನ್ನು ಇಂದು ಮಧ್ಯಾಹ್ನ ಹಮ್ಮಿಕೊಳ್ಳಲಾಗಿದೆ ಎಂದು ಬೆಸ್ಕಾಂ ಕಾರ್ಯ ನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ವಿದ್ಯುತ್ ಸಂಬAಧಿತ ಕುಂದು ಕೊರತೆ/ ನ್ಯೂನತೆ ಇದ್ದಲ್ಲಿ ಪರಸ್ಪರ ಚರ್ಚಿಸಿ, ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುವ ಸಲುವಾಗಿ ಈ ದಿನ ಬೆಸ್ಕಾಂ ಆದೇಶದಂತೆ ಶನಿವಾರದಂದು ಗ್ರಾಹಕರ ಕುಂದು ಕೊರತೆ ನಿವಾರಣೆ ಸಭೆಯನ್ನು ಆಯೋಜಿಸಲಾಗಿದೆ.
ನಗರದ ಎಪಿಎಂಸಿ ಯಾರ್ಡ್ ಎದುರಿಗಿರುವ ಬೆಸ್ಕಾಂ ಕಚೇರಿಯಲ್ಲಿ ಇಂದು ಮಧ್ಯಾಹ್ನ ೩ ಗಂಟೆಗೆ ಸಭೆಯನ್ನು ಹಮ್ಮಿಕೊಳ್ಳಲಾಗಿದೆ, ನಗರ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಬಾಶೆಟ್ಟಿಹಳ್ಳಿ, ಮೆಳೆಕೋಟೆ ಕ್ರಾಸ್ ಶಾಖೆ ವಿದ್ಯುತ್ ಗ್ರಾಹಕರು ಸಭೆಯಲ್ಲಿ ಭಾಗವಹಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೋರಲಾಗಿದೆ.