ಬಿಕ್ಲು ಶಿವ ಹತ್ಯೆ ಪ್ರಕರಣ:ಶಾಸಕ ಬೈರತಿ ಬಸವರಾಜ್ ಅವರನ್ನ ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟಣೆ.
ಸ್ಥಳೀಯ ಸುದ್ದಿಕ್ರೈಮ್


ಕೆ.ಆರ್.ಪುರ:ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ಬೈರತಿ ಬಸವರಾಜ ಅವರನ್ನು ಬಂಧಿಸಿ ಸೂಕ್ತ ರೀತಿಯಲ್ಲಿ ತನಿಖೆ ಮಾಡುವಂತೆ ಒತ್ತಾಯಿಸಿ ಇಲ್ಲಿನ ಕೆ.ಆರ್ ಪುರ ಬಿಬಿಎಂಪಿ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಕೆ ಮೋಹನ್ ಅವರು ಮಾತನಾಡಿ, ಹಲವಾರು ಅಪರಾಧ ಚಟುವಟಿಕೆಯ ಭಾಗವಾಗಿರುವ ಶಾಸಕ ಬೈರತಿ ಬಸವರಾಜ್ ವಿರುದ್ಧ ಎಸ್ಐಟಿ ತನಿಖೆ ಯಾಗಬೇಕೆಂದು ಒತ್ತಾಯಿಸಿದರು.
ಬೈರತಿ ಬಸವರಾಜ್ ಶಾಸಕರಾದ ನಂತರ ಕೆಆರ್ ಪುರ ಕ್ಷೇತ್ರದಲ್ಲಿ ಅವರ ಬೆಂಬಲಿಗ ರಿಂದ ಕೊಲೆ ಪ್ರಕರಣ, ಸಾರ್ವಜನಿಕರ ಮೇಲೆ ಹಲ್ಲೆಗಳು ಹೆಚ್ಚಾಗಿವೆ ಈ ಬಗ್ಗೆ ಪೊಲೀಸ್ ಠಾಣೆ ಗಳಲ್ಲಿ ದೂರು ಸಹ ದಾಖಲಾಗಿದೆ. ತಮ್ಮ ಅಧಿಕಾರದ ಪ್ರಭಾವ ಬಳಸಿಕೊಂಡು ಎಲ್ಲಾ ಪ್ರಕರಣಗಳನ್ನು ಮುಚ್ಚಿ ಹಾಕಿದ್ದಾರೆ ದೂರಿದರು.
ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಮಾತನಾಡಿ,ಕೆಆರ್ ಪುರ ಕ್ಷೇತ್ರವೂ ಶಾಂತಿ ಸುವ್ಯವಸ್ಥೆಯಿಂದ ಕೂಡಿತ್ತು. ಈಗ ರೌಡಿಸಂ ಕ್ಷೇತ್ರವಾಗಿ ಮಾರ್ಪಾಡಾಗಿದೆ ಎಂದು ದೂರಿದರು.
ಕ್ಷೇತ್ರದಲ್ಲಿ ಹಲವು ಅಕ್ರಮಗಳು ನಡೆದಿದ್ದು ಹಂತಹಂತವಾಗಿ ಎಲ್ಲ ಹಗರಣಗಳ ತನಿಖೆ ಮಾಡುವಂತೆ ಆಗ್ರಹಿಸಿದರು. ಶಾಸಕ ಬೈರತಿ ಬಸವರಾಜ್ ಅವರನ್ನು ಬಂಧಿಸಿ ತನಿಖೆ ನಡೆಸಬೇಕು,ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ನಾರಾಯಣಸ್ವಾಮಿ,ಪೂರ್ವ ಜಿಲ್ಲಾಧ್ಯಕ್ಷ ನಂದಕುಮಾರ್,ಮಾಜಿ ಪಾಲಿಕೆ ಸದಸ್ಯರಾದ ಬಂಡೆರಾಜು,ರಾಧಮ್ಮ ವೆಂಕಟೇಶ್, ಕೆಪಿಸಿಸಿ ಸದಸ್ಯ ಮಂಜುನಾಥ, ಮುಖಂಡರಾದ ಡಿ.ಕೆ.ದೇವೆಂದ್ರ, ಜಯರಾಮ್,ಪ್ರಕಾಶ್, ಮತ್ತಿತರರು ಇದ್ದರು.