ಪರಪ್ಪನ ಅಗ್ರಹಾರದಲ್ಲಿ CCB ದಾಳಿ: ಚಾಕು, ಚೂರಿ, ಬ್ಲೇಡ್, ಬೀಡಿ,ಸಿಗರೇಟ್, ಗಾಂಜಾ ವಶ.

ಸ್ಥಳೀಯ ಸುದ್ದಿಕ್ರೈಮ್

ಧರ್ಮ ಬಸವನಪುರ

6/18/20251 min read

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಗಾಂಜಾ, ಬ್ಲೇಡ್, ಚಾಕು, ನಗದು ಹಣ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಪರಪ್ಪನ ಅಗ್ರಹಾರ ಕಾರಾಗೃಹದ ಸಜಾಬಂಧಿ ಬ್ಯಾರಕ್ ಹಾಗೂ ವಿಐಪಿ ಬ್ಯಾರಕ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಸೋಮವಾರ ಬೆಳಿಗ್ಗೆ 6ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಿಸಿಬಿಯ 50ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಅಪಾರ ಪ್ರಮಾಣದ ನಿಷೇಧಿತ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.ನಿಷೇಧಿತ ವಸ್ತುಗಳನ್ನು ಯಾರು ಪೂರೈಸುತ್ತಿದ್ದರು ಎಂಬುದು ತನಿಖೆಯಿಂದ ಗೊತ್ತಾಗಲಿದೆ ಎಂದು ನಗರ ಪೊಲೀಸ್ ಕಮಿಷನರ್‌ ಸೀಮಂತ್‌ ಕುಮಾರ್ ಸಿಂಗ್ ತಿಳಿಸಿದರು.

ಪರಪ್ಪನ ಅಗ್ರಹಾರ ಕಾರಾಗೃಹದ ದಾಳಿಯಲ್ಲಿ ಕೈದಿಗಳಿಂದ ಗಾಂಜಾ ಸೇವನೆಗೆ ಬಳಸುವ ಸಾಧನಗಳು, ತಂಬಾಕು, ಚಾಕುಗಳು, ಬ್ಲೇಡ್‍ಗಳು, ಕತ್ತರಿಗಳು, 16,180 ರೂ. ನಗದು, ಹಲವಾರು ಚೂಪಾದ ಮತ್ತು ಅಪಾಯಕಾರಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.