ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಸ್ಚಚ್ಛ ಮಂತ್ರಾಲಯ ಅಭಿಯಾನ.
ಸ್ಥಳೀಯ ಸುದ್ದಿ


ಮಹದೇವಪುರ: ಶ್ರೀ ಗುರು ರಾಯರ ಆರಾಧನೆಯ ನಂತರ ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ, ಮಠದ ಆವರಣ, ನದಿ ತೀರ ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು ಸೆ.1 ರಿಂದ ಸೆ.3 ರ ವರೆಗೆ ಸ್ವಚ್ಛ ಮಂತ್ರಾಲಯ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿದರು.
ಸ್ವಚ್ಛ ಮಂತ್ರಾಲಯ ಸಂಬಂಧ ಕ್ಷೇತ್ರದ ಮಾರತ್ತಹಳ್ಳಿಯ ಶಾಸಕರ ಕಚೇರಿಯಲ್ಲಿ ನಡೆದ ಸ್ವಚ್ಛ ಮಂತ್ರಾಲಯ ಅಭಿಯಾನದ ಪೂರ್ವ ಭಾವಿ ಸಭೆಯಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಭಾಗವಹಿಸಿ ತಯಾರಿ ಬಗ್ಗೆ ಚರ್ಚೆ ನಡೆಸಿದರು.
ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಿಂದ ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುವ ಸ್ವಚ್ಛ ಮಂತ್ರಾಲಯ ಅಭಿಯಾನವು ಈ ಬಾರಿ ಸೆಪ್ಟೆಂಬರ್ 1, 2 ಮತ್ತು 3 ರಂದು ಒಟ್ಟು 3 ದಿನ ನಡೆಯಲಿದ್ದು, ಸಾವಿರಾರು ಜನರು ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪೂರ್ವಭಾವಿ ಸಭೆಯಲ್ಲಿ ತಿಳಿಸಿದರು.
ಸ್ವಚ್ಛ ಮಂತ್ರಾಲಯ ಅಭಿಯಾನ ಯಶಸ್ವಿಗೊಳಿಸಲು ಈಗಾಗಲೇ ನಮ್ಮ ಮುಖಂಡರು ಹಾಗೂ ಕಾರ್ಯಕರ್ತರನ್ನೊಳ ಗೊಂಡ ತಂಡಗಳನ್ನು ರಚಿಸಿದ್ದು, ಆ ತಂಡಗಳಿಗೆ ನೀಡಿರುವ ಜವಾಬ್ದಾರಿಯ ಬಗೆಗಿನ ಮಾಹಿತಿ ಮತ್ತು ಪ್ರಗತಿಯ ಬಗ್ಗೆ ಲಿಂಬಾವಳಿ ಅವರು ಚರ್ಚೆ ನಡೆಸಿ, ಸಲಹೆ ಸೂಚನೆಗಳನ್ನು ನೀಡಿದರು.
ಈ ಸಭೆಯಲ್ಲಿ ನಗರ ಮಂಡಲದ ಅಧ್ಯಕ್ಷರಾದ ಎನ್. ಆರ್. ಶ್ರೀಧರ್ ರೆಡ್ಡಿ, ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಹೆಚ್. ಎಸ್. ಪಿಳ್ಳಪ್ಪ, ಗ್ರಾಮಾಂತರ ಮಂಡಲದ ಮಾಜಿ ಅಧ್ಯಕ್ಷರಾದ ಬಿ. ಎನ್. ನಟರಾಜ್ ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.