ಬಿಗ್ ಬಾಸ್ ವಿಜೇತ ಗಿಲ್ಲಿ ನಟನನ್ನ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

ಸ್ಥಳೀಯ ಸುದ್ದಿ

ಧರ್ಮ ಬಸವನಪುರ.

1/23/20261 min read

ಬೆಂಗಳೂರು: 12ನೆಯ ಆವೃತ್ತಿಯ ಬಿಗ್ ಬಾಸ್ ವಿಜೇತ ನಟ ಗಿಲ್ಲಿ ನಟರಾಜ್ ಇವರನ್ನು ಸಿಎಂ ಸಿದ್ದರಾಮಯ್ಯ ಇವರು ಬೆಂಗಳೂರಿನ ತಮ್ಮ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಅಭಿನಂದಿಸಿದರು.

ಈ ವೇಳೆ ನಟ ಗಿಲ್ಲಿ ಇವರಿಗೆ ಶುಭ ಕೋರಿದ ಮುಖ್ಯಮಂತ್ರಿಗಳು ಮುಂದಿನ ಭವಿಷ್ಯವು ಉತ್ತಮವಾಗಿರಲಿ ಎಂದು ಶುಭ ಹಾರೈಸಿದರು.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಡದಪುರ ಗ್ರಾಮದವರಾದ ಗಿಲ್ಲಿ ನಟರಾಜ್ ಇವರು ತಮ್ಮ ಸಹಜ ನಡುವಳಿಕೆ ಹಾಗೂ ಮಾತಿನ ಮೋಡಿಯಿಂದಾಗಿ ಕರ್ನಾಟಕ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲುವ ಮೂಲಕ ಅತೀ ಹೆಚ್ಚು ಮತಗಳನ್ನು ಪಡೆದು ಗಿಲ್ಲಿ ಇವರು ಬಿಗ್ ಬಾಸ್ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಫೋಟೊಗಳನ್ನು ಹಂಚಿಕೊಂಡಿದ್ದು, '12ನೇ ಆವೃತ್ತಿಯ ಬಿಗ್ ಬಾಸ್ ವಿಜೇತ ಗಿಲ್ಲಿ ನಟರಾಜ್ ಅವರನ್ನು ಅಭಿನಂದಿಸಿ, ಮುಂದಿನ ಜೀವನ ಇನ್ನಷ್ಟು ಯಶಸ್ಸು, ಸಂತಸದಿಂದ ಕೂಡಿರಲಿ ಎಂದು ಶುಭ ಹಾರೈಸಿದೆ' ಎಂದು ಬರೆದುಕೊಂಡಿದ್ದಾರೆ.

ಭೇಟಿ ವೇಳೆ ಹಾರ ಹಾಕಿ ಗಿಲ್ಲಿ ನಟ ಅವರನ್ನು ಸಿಎಂ ಸನ್ಮಾನಿಸಿದ್ದಾರೆ.

ಈ ಸಂದರ್ಭದಲ್ಲಿ ಸಚಿವ ಭೈರತಿ ಸುರೇಶ್ ಹಾಗೂ ಸಿಎಂ ಅವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಸೇರಿದಂತೆ ಇನ್ನು ಹಲವರು ಉಪಸ್ಥಿತರಿದ್ದರು.