Congress Party: ಕಾಂಗ್ರೆಸ್ ನ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪ್ರಮಾಣ ಪತ್ರ ವಿತರಣೆ.

ಸ್ಥಳೀಯ ಸುದ್ದಿ

ಧರ್ಮ ಬಸವನಪುರ

4/7/20251 min read

ಮಹದೇವಪುರ: ಕಾಂಗ್ರೆಸ್ ಪಕ್ಷವನ್ನು ಮಹದೇವಪುರ ಕ್ಷೇತ್ರದಲ್ಲಿ ಸದೃಢವಾಗಿ ಕಟ್ಟುವ ಕಾರ್ಯ ಮಾಡಲು ಪದಾಧಿಕಾರಿಗಳು ಶ್ರಮಿಸುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮನ್ಸೂರ್ ಅಲಿಖಾನ್ ಅವರು ತಿಳಿಸಿದರು.

ಮಹದೇವಪುರ ಕ್ಷೇತ್ರದ ಹೂಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಏರ್ಪಡಿಸಿದ್ದ ನೂತನವಾಗಿ ನೇಮಕವಾದ ಪದಾಧಿಕಾರಿಗಳಿಗೆ ಪ್ರಮಾಣಪತ್ರ ವಿತರಣೆ ಮಾಡಿ ಮಾತನಾಡಿದರು.

ಮಹದೇವಪುರ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿತ್ತು,ಆದರೆ ಸಂಘಟನೆ ಕೊರತೆಯಿಂದ ಬಿಜೆಪಿ ಶಾಸಕರು ಜಯಗಳಿಸಿದ್ದಾರೆ,ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಗೊಳಿಸುವ ಮೂಲಕ ಮುಂದಿನ ಬಾರಿ ಕಾಂಗ್ರೆಸ್ ಪಕ್ಷದ ಬಾವುಟ ಹಾರಿಸುವಂತೆ ಪ್ರತಿಯೊಬ್ಬರೂ ಶ್ರಮಿಸೋಣ ಎಂದು ಕರೆ ನೀಡಿದರು.

ಕಳೆದ ಮೂರು ಬಾರಿಯಿಂದಲೂ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗುತ್ತಿದ್ದು,ಮುಂದಿನ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪಕ್ಷ ಸಂಘಟನೆ ಸೇರಿದಂತೆ ಸಮಾಜಿಕ ಜಾಲತಾಣ ವಿಭಾಗವನ್ನು ಸದೃಢವಾಗಿ ಕಟ್ಟಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಲ್ಲೂರಹಳ್ಳಿ ನಾಗೇಶ್ ಅವರು ಬೂತ್ ಮಟ್ಟದಿಂದ ಪಕ್ಷ ಸಂಘಟನೆ ಮಾಡಬೇಕು,ಬೂತ್ ಮಟ್ಟದಲ್ಲಿ ಕೈ ಪಕ್ಷಕ್ಕೆ ಮುನ್ನಡೆ ಕಲ್ಪಿಸುವ ಕಾರ್ಯ ಮಾಡಬೇಕು ಎಂದು ತಿಳಿಸಿದರು.

ಡಿಸಿಸಿ ಸದಸ್ಯರಾಗಿ ನೇಮಕವಾದ ಬಿದರಹಳ್ಳಿಯ ಮಾಜಿ ಗ್ರಾಮ ಪಂಚಾಯತಿ ಸದಸ್ಯ ಎನ್.ಹರೀಶ್ ಅವರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮನ್ಸೂರ್ ಅಲಿಖಾನ್ ಅವರು ಪ್ರಮಾಣ ಪತ್ರ ವಿತರಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಎಚ್.ನಾಗೇಶ್, ಬೆಂಗಳೂರು ಪೂರ್ವ ಕಾಂಗ್ರೆಸ್ ಅಧ್ಯಕ್ಷ ನಂದಕುಮಾರ್, ಕೆಪಿಸಿಸಿ ಉಪಾಧ್ಯಕ್ಷ ಮಂಜುನಾಥ, ಆಯೋಜಕ ಹೂಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ. ಮಯಾಂಕ್ ಬಾಬು, ಗ್ಯಾರಂಟಿ ಸಮಿತಿ ಅಧ್ಯಕ್ಷ ಪ್ರಶಾಂತ್, ಡಿಸಿಸಿ ಸದಸ್ಯ ಎನ್.ಹರೀಶ್ ಇದ್ದರು.

ಇತ್ತೀಚಿನ ಸುದ್ದಿ