ಮಹದೇವಪುರ ಕಾಂಗ್ರೆಸ್ ನಲ್ಲಿ ಭಿನ್ನಮತ,ಎ‍‍ಚ್ ನಾಗೇಶ್ ಅವರ ಮುಂದೆಯೇ ಅಸಮಾಧಾನ ಸ್ಪೋಟ.

ಸ್ಥಳೀಯ ಸುದ್ದಿ

ಧರ್ಮ ಬಸವನಪುರ.

8/25/20251 min read

ಮಹದೇವಪುರ: ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಪಕ್ಷದ ಸಭೆಯಲ್ಲಿ ಕಾರ್ಯಕರ್ತರ ನಡುವೆ ಗದ್ದಲ ನಡೆದಿದೆ.

ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಪಾಲಿಕೆ ಸದಸ್ಯ ಉದಯ್ ಕುಮಾರ್ ಬೆಂಬಲಿಗರು ಮತ್ತು ಮಾಜಿ ಸಚಿವ ಹೆಚ್ ನಾಗೇಶ್ ರವರ ನಡುವೆ ಸಂಘರ್ಷ ಏರ್ಪಟ್ಟಿದ್ದು, ಪಣತ್ತೂರು ಸಮೀಪದ ಖಾಸಗಿ ಹೋಟೆಲ್ ನಲ್ಲಿ ಹಮ್ಮಿಕೊಂಡಿದ ವಾರ್ಡ್ ಸಭೆಯಲ್ಲಿ ಶನಿವಾರ ಗಲಾಟೆ ನಡೆದಿದೆ. ಗದ್ದಲದಿಂದ ಸಭೆಯನ್ನ ರದ್ದು ಮಾಡಲಾಯಿತು.

ಸತತವಾಗಿ ನಾಲ್ಕು ಬಾರಿ ಪಾಲಿಕೆ ಸದಸ್ಯರಾಗಿದ್ದು ಉದಯ್ ಕುಮಾರ್ ಅವರನ್ನು ಮಾಜಿ ಸಚಿವ ಹೆಚ್ ನಾಗೇಶ್ ಗಣನೆಗೆ ತೆಗೆದುಕೊಳ್ಳದೆ ನಿರ್ಲಕ್ಷಿಸಲಾಗುತ್ತಿದ್ದಾರೆಂದು ಉದಯ್ ಕುಮಾರ್ ಪರ ಅವರ ಬೆಂಬಲಿಗರು ಧ್ವನಿ ಎತ್ತಿದರು‌‌.

ಕ್ಷೇತ್ರದಲ್ಲಿ ಇಪ್ಪತ್ತು ಐದು ವರ್ಷಗಳಿಂದ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿರುವ ನಿಷ್ಠಾವಂತ ಕಾರ್ಯಕರ್ತರಿಗೆ ಕ್ಷೇತ್ರದಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಕ್ಕೆ ಆಹ್ವಾನ ನೀಡುತ್ತಿಲ್ಲ ಎಂದು ದೂರಿದರು.

ಹೆಚ್ ನಾಗೇಶ್ ಅವರ ಈ ನಡೆಯನ್ನ ಖಂಡಿಸಿ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವ ಹೆಚ್ ನಾಗೇಶ್ ಮತ್ತು ಮಾಜಿ ಪಾಲಿಕೆ ಸದಸ್ಯ ಉದಯ್ ಕುಮಾರ್ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಮಧ್ಯೆ ಪ್ರವೇಶಿಸಿದ ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ನಂದಕುಮಾರ್ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಮಹದೇವಪುರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ ಉಂಟಾಗಿರುವ ಒಡಕು ಸರಿಪಡಿಸಲಾಗುವುದು ಪಕ್ಷವನ್ನು ಸಂಘಟಿಸಲಾಗುವುದು‌ ಎಂದು ಪೂರ್ವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ನಂದಕುಮಾರ್ ತಿಳಿಸಿದರು