Doddaballapur : ಅಕ್ರಮ ಗೋಮಾಂಸ ಸಾಗಾಟ, ವಾಹನ ತಡೆದು ಪೊಲೀಸರಿಗೊಪ್ಪಿಸಿದ ಸ್ಥಳೀಯರು
ಕ್ರೈಮ್


ದೊಡ್ಡಬಳ್ಳಾಪುರ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ಸ್ಥಳೀಯರು ತಡೆದು ಪೊಲೀಸರಿಗೆ ಒಪ್ಪಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ ಗುಂಜೂರು ಬಳಿ ನಡೆದಿದೆ.
ಇಂದು ಬೆಳಗ್ಗೆ ಆಂಧ್ರ ಮೂಲದ ವಾಹನದಲ್ಲಿ ಅಕ್ರಮವಾಗಿ ಸುಮಾರು ಎರಡು ಟನ್ ಗೋಮಾಂಸ ಸಾಗಿಸುತ್ತಿರುವ ಬಗ್ಗೆ ಸ್ಥಳೀಯರಿಗೆ ಅನಾಮದೇಯರು ಮಾಹಿತಿ ನೀಡಿದ ಆಧಾರದ ಮೇಲೆ ತಾಲೂಕಿನ ಗುಂಜೂರು ಟೋಲ್ ಸಮೀಪ ವಾಹನವನ್ನು ತಡೆದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಸ್ಥಳಕ್ಕಾಗಿಮಿಸಿದ ಪೊಲೀಸರು ವಾಹನವನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದು ತನಿಖೆ ಮುಂದುವರೆಸಿದ್ದಾರೆ. ಈ ಘಟನೆಯೂ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.