ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ವ್ಯಕ್ತಿ ಕೆರೆಯಲ್ಲಿ ಶವವಾಗಿ ಪತ್ತೆ
ಸ್ಥಳೀಯ ಸುದ್ದಿಕ್ರೈಮ್


ಕಳೆದ ಎರಡು ದಿನಗಳಿಂದ ಕಾಣೆಯಾಗಿದ್ದ ವ್ಯಕ್ತಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಮೃತನನ್ನು ಜೋಡಿ ಕಾರೇಪುರ (ತಾಡಿಪಾಳ್ಯ)ದ 35 ವರ್ಷದ ಚಿಕ್ಕಣ್ಣ ಎಂದು ಗುರುತಿಸಲಾಗಿದೆ.
ಜೂ.14 ರಂದು ಮೃತ ಚಿಕ್ಕಣ್ಣ ಬಹಿರ್ದೆಸೆಗೆ ಕೆರೆಯ ಬಳಿ ತೆರಳಿ ಕಾಲು ಜಾರಿ ಬಿದ್ದು, ಸಾವನ್ನಪ್ಪಿರಬಹುದೆಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಇಂದು ಕೆರೆಯಲ್ಲಿ ಮೃತ ದೇಹ ತೇಲುತ್ತಿರುವುದು ಕಂಡು ಬಂದಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ದೊಡ್ಡಬೆಳವಂಗಲ ಠಾಣೆ ಪೊಲೀಸರು ಭೇಟಿ ನೀಡಿ ಶವವನ್ನು ಕೆರೆಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.