ದೇಶದ ಏಳಿಗೆಗೆ ಹೋರಾಡಿದ ಮಹಾನ್ ಚೇತನ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌

ಸ್ಥಳೀಯ ಸುದ್ದಿ

ರಾಘವೇಂದ್ರ ಹೆಚ್.ಎ

4/16/20251 min read

ಕೆ.ಆರ್.ಪುರ : ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 135ನೇ ಜನ್ಮದಿನವನ್ನು ರಾಮಮೂರ್ತಿನಗರದ ಅಂಬೇಡ್ಕರ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಪ್ರೌಢಶಾಲೆ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜಿನ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಆಚರಣೆ ಮಾಡಲಾಯಿತು.

ಡಾ. ಬಿ.ಆರ್. ಅಂಬೇಡ್ಕರ್ ರವರ ಭಾವ ಚಿತ್ರಕ್ಕೆ ಶಾಲಾ ಕಾಲೇಜಿನ ಮುಖ್ಯಸ್ಥರಾದ ಹಿಟ್ಟಾಚ್ಚಿ ಮಂಜುನಾಥ ರವರು,ಹಾಗೂ ಅಧ್ಯಾಪಕರು ಸೇರಿ ಪುಷ್ಪ ನಮನ ಸಲ್ಲಿಸಿದರು.

ನಂತರ ಮಾತನಾಡಿದ ಕಾಲೇಜಿನ ಮುಖ್ಯಸ್ಥ ಹಿಟ್ಟಾಚ್ಚಿ ಮಂಜುನಾಥ್ ಅವರು,ಅಂಬೇಡ್ಕರ್ ಅವರು ದಲಿತರು, ಬಡವರು, ನಿರ್ಗತಿಕರು ಹಾಗೂ ಮಹಿಳೆಯರ ಉದ್ಧಾರಕ್ಕಾಗಿ ಹೋರಾಡಿದ ಮಹಾನ್ ಚೇತನ ಎಂದು ತಿಳಿದರು.

ಭಾರತ ರತ್ನ ಅಂಬೇಡ್ಕರ್ ರಚಿಸಿದ ಸಂವಿಧಾನದಿಂದಾಗಿ ನಾವೆಲ್ಲರೂ ಇಂದು ಸರಿಸಮಾನವಾಗಿ ಶಿಕ್ಷಣ ಪಡೆಯುವಂತಾಗಿದೆ. ಸಮಾನತೆ ಹಕ್ಕು ದೊರಕಿಸಿಕೊಟ್ಟ ಅಂಬೇಡ್ಕರ್ ಅವರಿಗೆ ನಾವು ಚಿರಋಣಿಯಾಗಿರಬೇಕು ಹೇಳಿದರು.

ಜೀವನದಲ್ಲಿ ಪ್ರಗತಿ ಕಾಣಬೇಕಾದರೆ ಎಲ್ಲರಿಗೂ ಶಿಕ್ಷಣ ಅಗತ್ಯ. ಅವರ ಪ್ರಯತ್ನದ ಫಲವಾಗಿ ಇಂದು ಎಲ್ಲರು ಶಿಕ್ಷಣವಂತರಾಗಲು ಸಾಧ್ಯವಾಗಿದೆ ಎಂದು ನುಡಿದರು.

ಸಂವಿಧಾನ ಶಿಲ್ಪಿ ಬಾಬಾಸಾಹೇಬ್‌ ಅಂಬೇಡ್ಕರ್‌ ಎರಡು ಲಕ್ಷ ಪುಸ್ತಕಗಳನ್ನು ಓದಿ ಕಂಠಪಾಠ ಮಾಡಿದ ಭಾರತದ ಅತ್ಯಂತ ವಿದ್ಯಾವಂತ ವ್ಯಕ್ತಿಯಾಗಿದ್ದರು ಎಂದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಕುಮಾರ್, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಬಿ.ವಿ.ಭಾರತಿರವರು ಸೇರಿದಂತೆ ಶಾಲಾ ಕಾಲೇಜಿನ ಉಪನ್ಯಾಸಕರು, ಸಹ ಶಿಕ್ಷಕರು, ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.