ಕಾಂಗ್ರೆಸ್ ಶಾಸಕನ ಮನೆ ಮೇಲೆ ಇಡಿ ದಾಳಿ,ವಿದೇಶಿ ಬ್ಯಾಂಕ್ ಖಾತೆಗಳ ಮಾಹಿತಿ ಪರಿಶೀಲನೆ

ರಾಜ್ಯರಾಜಕೀಯ

RAGHAVENDRA H A

7/10/20251 min read

ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರ ಬೆಂಗಳೂರು ನಿವಾಸ, ಕಚೇರಿ ಸೇರಿದಂತೆ ಅವರಿಗೆ ಸೇರಿದ ಐದು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಉದ್ಯಮಿಯೂ ಆಗಿರುವ ಸುಬ್ಬಾರೆಡ್ಡಿ ವಿವಿಧ ದೇಶಗಳಲ್ಲಿ ಆಸ್ತಿ ಮತ್ತು ವಿದೇಶಗಳಲ್ಲಿ ಬ್ಯಾಂಕ್‌ ಖಾತೆಗಳನ್ನು ಹೊಂದಿದ್ದಾರೆ. ಅಕ್ರಮವಾಗಿ ಹಣ ವರ್ಗಾವಣೆ ವಿಚಾರವಾಗಿ ದಾಳಿ ನಡೆದಿದೆ ಎನ್ನಲಾಗಿದೆ.

ಶಾಸಕ ಸುಬ್ಬಾರೆಡ್ಡಿ ಕುಟುಂಬ ಸದಸ್ಯರು ಹೊಂದಿರುವ ವಿದೇಶಿ ಆಸ್ತಿ ಮತ್ತು ಅವರ ಉದ್ಯಮ ಪಾಲುದಾರರಿಗೆ ಸೇರಿದ ಆಸ್ತಿ ಮೇಲೆ ದಾಳಿ ನಡೆದಿದೆ. ವಿದೇಶಗಳಲ್ಲಿ ಬ್ಯಾಂಕ್ ಅಕೌಂಟ್‌, ವಿದೇಶಿ ವ್ಯವಹಾರದಲ್ಲಿ ಹೂಡಿಕೆ ವಿಚಾರವಾಗಿ ಶೋಧ ನಡೆಸಲಾಗುತ್ತಿದೆ. ಸುಬ್ಬಾರೆಡ್ಡಿ ಮಲೇಷ್ಯಾ, ಹಾಂಕಾಂಗ್, ಜರ್ಮನಿಯಲ್ಲಿ ಆಸ್ತಿ ಹೊಂದಿದ್ದಾರೆ. ಸುಬ್ಬಾರೆಡ್ಡಿ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಮೂರುಬಾರಿ ಶಾಸಕರಾಗಿದ್ದಾರೆ.

ಪ್ರಜಾ ಭಾರತ್ ನ್ಯೂಸ್ ವೆಬ್ ಪೋರ್ಟಲ್ ವಾಟ್ಸಪ್ ಗ್ರೂಪ್ ಸೇರಲು 👇👇Follow this link to join my WhatsApp group: https://chat.whatsapp.com/Fj6L4Eak7N994zl2QHSpHK