ಮಾಲೂರುನಲ್ಲಿ ಭೀಕರ ಅಪಘಾತ: ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ರುಂಡ ಕಟ್.ನಜ್ಜುಗುಜ್ಜಾದ ಕಾರು.
ಕ್ರೈಮ್ಜಿಲ್ಲಾ ಸುದ್ದಿ


ಕೋಲಾರ: ಮಾಲೂರು ತಾಲ್ಲೂಕು ಭಾವನಹಳ್ಳಿಯಲ್ಲಿ ಮರಕ್ಕೆ ಕಾರು ಡಿಕ್ಕಿ ಹೊಡೆದು ಗರ್ಭಿಣಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
25 ವರ್ಷದ ಅರ್ಚನಾ ಸಾವನ್ನಪ್ಪಿದ ಗರ್ಭಿಣಿಯಾಗಿದಾರೆ.
ರಸ್ತೆಯಲ್ಲಿ ಹೋಗುತ್ತಿದ್ದಾಗ ಎದುರಿಗೆ ಲಾರಿಯೊಂದು ಬಂದಿದ್ದು, ಅದನ್ನು ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಕಾರಿನಲ್ಲಿದ್ದ ಅರ್ಚನಾ ದೇಹದಿಂದ ರುಂಡ ಹಾಗೂ ಎಡಗೈ ಭಾಗ ಪ್ರತ್ಯೇಕವಾಗಿದೆ.ಪರಿಣಾಮ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ವೇಗವಾಗಿ ಚಲಿಸುತ್ತಿದ್ದ ವೇಳೆ ಚಾಲಕನ ನಿರ್ಲಕ್ಷ್ಯದಿಂದಾಗಿ ರಸ್ತೆ ಬದಿಯಲ್ಲಿದ್ದ ಮಾವಿನ ಮರಕ್ಕೆ ಡಿಕ್ಕಿ ಹೊಡೆದಿದೆ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಮಾಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.