ಪ.ಜಾತಿ ಹಾಗೂ ಪ.ಪಂಗಡದ ಮೀನು ಮಾರಾಟಗಾರರಿಗೆ ವಾಹನ ಖರೀದಿಸಲು ಆರ್ಥಿಕ ನೆರವು
ಸ್ಥಳೀಯ ಸುದ್ದಿಜಿಲ್ಲಾ ಸುದ್ದಿ


ಬೆಂ.ಗ್ರಾ.ಜಿಲ್ಲೆ: ಮೀನುಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮದಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಆಯ್ದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರದ ವಾಹನ ಖರೀದಿಸಲು ಆರ್ಥಿಕ ನೇರವು ನೀಡಲಾಗುತ್ತಿದೆ.
ನಾಲ್ಕು ಚಕ್ರದ ವಾಹನ ಖರೀದಿಸಲು ಶೇ. 50% ರಷ್ಟು ಅಥವಾ ಗರಿಷ್ಟ 3.00 ಲಕ್ಷ ಆರ್ಥಿಕ ನೆರವು ನೀಡಲಾಗುವುದು. ಆಸಕ್ತರು ಆಯಾ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಸೆಪ್ಟೆಂಬರ್ 15 ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಉಪ ನಿರ್ದೇಶಕರು ಕಚೇರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೊ.ನಂ: 9880609384, ಮೀನುಗಾರಿಕೆ ಸಹಾಯಕ ನಿರ್ದೇಶಕರು ದೇವನಹಳ್ಳಿ, ಮೊ.ನಂ 9448500385, ಮೀನುಗಾರಿಕೆ ಸಹಾಯಕ ನಿರ್ದೇಶಕರು ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ ಮೊ.ನಂ 8747012127, ಮೀನುಗಾರಿಕೆ ಸಹಾಯಕ ನಿರ್ದೇಶಕರು ಹೊಸಕೋಟೆ, ಮೊ.ನಂ 98451800161 ಗೆ ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾ ಭಾರತ್ ನ್ಯೂಸ್ ವೆಬ್ ಪೋರ್ಟಲ್ ವಾಟ್ಸಪ್ ಗ್ರೂಪ್ ಸೇರಲು 👇👇Follow this link to join my WhatsApp group : https://chat.whatsapp.com/Fj6L4Eak7N994zl2QHSpHK