ಬೆಂಕಿ ಅವಘಡ: ಹೊಸಕೋಟೆ ಕೈಗಾರಿಕಾ ಪ್ರದೇಶದ ಕಾರ್ಖಾನೆಗೆ ಬೆಂಕಿ!
ಸ್ಥಳೀಯ ಸುದ್ದಿ


ಹೊಸಕೋಟೆ:- ಇಂದು ಬೆಳಗಿನ ಜಾವ ಸುಮಾರು 3:30ರ ವೇಳೆಗೆ ಹೊಸಕೋಟೆ ಕೈಗಾರಿಕಾ ಪ್ರದೇಶದಲ್ಲಿರುವ ವಾರ್ಮ್ ಗೇರ್ಸ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ.
ಕಾರ್ಖಾನೆಯಲ್ಲಿ ದೊಡ್ಡ ಪ್ರಮಾಣದಲ್ಲಿ ವೇಸ್ಟ್ ಪ್ಲಾಸ್ಟಿಕ್ ಸಂಗ್ರಹವಾಗಿದ್ದ ಹಿನ್ನೆಲೆ ಬೆಂಕಿ ವೇಗವಾಗಿ ವ್ಯಾಪಿಸಿದೆ ಎಂದು ಮೂಲಗಳು ತಿಳಿಸಿವೆ.
ಸಂಭವಿಸಿದ ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ನಾಲ್ಕಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡಿವೆ. ಸುಮಾರು ನಾಲ್ಕು ಗಂಟೆಗಳ ಕಾಲ ದಗ್ದವಾಗಿದ್ದ ಬೆಂಕಿಯನ್ನು ನಂದಿಸಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು.
ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಪಿಲುಗುಂಪ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ