ಕೆ.ಆರ್.ಪುರ: ಆಲ್ಟೊರ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ
ಸ್ಥಳೀಯ ಸುದ್ದಿ


ಕೆ.ಆರ್.ಪುರ: ಆಲ್ಟೊರ್ ಆಸ್ಪತ್ರೆಯ ಮೂರನೇ ವರ್ಷದ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಕೆ.ಆರ್.ಪುರದ ಟಿಸಿಪಾಳ್ಯದಲ್ಲಿ ನಡೆಸಲಾಯಿತು.
ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಡಾ.ವಿನಾಯಕ್ ಅವರು ಕಳೆದ ಮೂರು ವರ್ಷಗಳಲ್ಲಿ ಸಮಾಜಮುಖಿ ಕಾರ್ಯಗಳನ್ನು ಮಾಡಲಾಗಿದ್ದು,ಬಡವರಿಗೆ ಉತ್ತಮ ಆರೋಗ್ಯ ನೀಡುವುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದರು.
ಸಾಮಾನ್ಯ ರೋಗಗಳ ತಪಾಸಣೆ, ಹೃದಯ ಸಂಬಂಧಿ ಕಾಯಿಲೆ, ಕಿವಿ, ಹಲ್ಲು ಇಸಿಜಿ, ಮೂಳೆ ಸಾಂದ್ರತೆ, ರಕ್ತದೊತ್ತಡ, ಮಧುಮೇಹ ಸೇರಿದಂತೆ ವಿವಿಧ ತಪಾಸಣೆ ನಡೆಸಲಾಯಿತು.
ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನೂರಾರು ಮಂದಿ ಸದುಪಯೋಗ ಪಡಿಸಿಕೊಂಡಿದ್ದು,ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇರುವ ಬಡವರಿಗೆ ಶೇ.50ರ ರಿಯಾಯಿತಿಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗುವುದು ಎಂದು ಹೇಳಿದರು.
ಸುತ್ತಮುತ್ತಲಿನ ಬಡಜನತೆಯ ಸದುಪಯೋಗಕ್ಕಾಗಿ ಆರು ತಿಂಗಳಿಗೊಮ್ಮೆ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗುತ್ತದೆ. ಮೂಳೆ ತಜ್ಞರು, ಸ್ತ್ರೀ ರೋಗ ತಜ್ಞರು, ಹೃದಯ ತಜ್ಞರು, ಮಕ್ಕಳ ತಜ್ಞರು, ಮೂತ್ರಪಿಂಡ ವೈದ್ಯರು ಸೇರಿದಂತೆ ಎಲ್ಲ ರೀತಿಯ ಕಾಯಿಲೆಗಳನ್ನು ತಜ್ಞ ವೈದ್ಯರು ಈ ಶಿಬಿರದಲ್ಲಿ ಭಾಗವಹಿಸಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಕ್ಟೋರ್ ಆಸ್ಪತ್ರೆ ವೈದ್ಯ ಡಾ.ಲವೀನ್ ಗೌಡ, ಡಾ.ಮೆಹೀನ್ ವಾಜ್, ಎಂ. ಹರೀಣಿ ಇದ್ದರು.