ತೂಬಗೆರೆಯಲ್ಲಿ ನಾಳೆ ಉಚಿತ ಆರೋಗ್ಯ ಶಿಬಿರ
ಸ್ಥಳೀಯ ಸುದ್ದಿ


ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಇಲ್ಲಿನ ಸಮುದಾಯ ಭವನದಲ್ಲಿ ನಾಳೆ ದಿನಾಂಕ: 25/05/2025 ಭಾನುವಾರ ದಂದು ಆಯೋಜಿಸಿಲಾಗಿದೆ.
ಸಪ್ತಗಿರಿ ಆಸ್ಪತ್ರೆಯ ನುರಿತ ವೈದ್ಯರ ತಂಡ ಆಗಮಿಸುತ್ತಿದ್ದು ತಮ್ಮ ಎಲ್ಲಾ ರೀತಿಯ ರೋಗ ರುಜಿನಗಳಿಗೆ ಸೂಕ್ತ ಸಲಹೆ ಮತ್ತು ಸೂಚನೆಗಳು ಹಾಗೂ ಉಚಿತ ಔಷಧ ವಿತರಣೆ ಮಾಡುತ್ತಾರೆ. ತೂಬಗೆರೆ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಈ ಮೂಲಕ ವಿನಂತಿ.

