ಆಸ್ತಿ ಮಾಲೀಕರಿಗೆ ಗುಡ್​ ನ್ಯೂಸ್, B-ಖಾತ ವಿತರಣೆ ಅವಧಿ ವಿಸ್ತರಣೆ

ರಾಜ್ಯ

ರಾಘವೇಂದ್ರ ಹೆಚ್.ಎ

5/15/20251 min read

ಕರ್ನಾಟಕದ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಸರ್ಕಾರವು ಮೂರು ತಿಂಗಳವರೆಗೆ ವಿಸ್ತರಿಸಿದೆ. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಜಿಪಿಎ ಮತ್ತು ಅಗ್ರಿಮೆಂಟ್‌ದಾರರಿಗೂ ಬಿ-ಖಾತಾ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಈ ಹಿಂದೆ ನೀಡಲಾದ ಅವಕಾಶದಲ್ಲಿ ಸುಮಾರು 2 ಲಕ್ಷ ಆಸ್ತಿಗಳಿಗೆ ಬಿ-ಖಾತೆ ವಿತರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. 

ಬೆಂಗಳೂರಿನಲ್ಲಿ ಬುಧವಾರ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಂದರೆ, ಯಾವುದೇ ಪರವಾನಗಿ, ಭೂಪರಿವರ್ತನೆ ಮಾಡಿಸಿಕೊಳ್ಳದೇ, ನಕ್ಷೆ ಮಂಜೂರಾತಿ ಮಾಡಿಕೊಳ್ಳದೇ ಕಂದಾಯ ನಿವೇಶನಗಳಲ್ಲಿ ಕಟ್ಟಡಗಳನ್ನು ಕಟ್ಟಿಕೊಂಡಿದ್ದರೆ ಅಂತಹವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿ-ಖಾತ ನೀಡಿ ಸಕ್ರಮಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿತ್ತು ಎಂದಿದ್ದಾರೆ. 

ಇದರ ಅನ್ವಯ ನಾಗರಿಕರಿಗೆ ಒಂದು ಬಾರಿ ಬಿ ಖಾತೆ ವಿತರಣೆಗೆ ಅವಕಾಶವನ್ನು ನೀಡಲಾಗಿತ್ತು. ಮೇ ತಿಂಗಳ 10ರ ವೇಳೆಗೆ ಬಿ-ಖಾತಾ ಪಡೆದುಕೊಳ್ಳಲು ಸಮಯ ನೀಡಲಾಗಿತ್ತು. ನಾಗರಿಕರು ನಿಗದಿತ ಶುಲ್ಕಗಳನ್ನು ಪಾವತಿ ಮಾಡಿ ತಮ್ಮ ಕಟ್ಟಡಗಳಿಗೆ ಬಿ-ಖಾತಾ ಪಡೆದುಕೊಳ್ಳಬಹುದಾಗಿದೆ.