PUC Re Exam: ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಸಿಹಿಸುದ್ದಿ, ಮರು ಪರೀಕ್ಷೆಗೆ ಶುಲ್ಕ ವಿನಾಯಿತಿ

ರಾಜ್ಯ

ರಾಘವೇಂದ್ರ ಹೆಚ್​​.ಎ

4/12/20251 min read

ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಈಗಾಗಲೇ ಪ್ರಕಟಿಸಲಾಗಿದ್ದು, ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ.

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಪರೀಕ್ಷೆ-2 ಮತ್ತು ಪರೀಕ್ಷೆ- 3 ಬರೆಯಲು ಶಿಕ್ಷಣ ಇಲಾಖೆ ಅನುವು ಮಾಡಿಕೊಟ್ಟಿದ್ದೆ. ಈ ಮರು ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಯಾವುದೇ ಶುಲ್ಕವನ್ನು ಕಟ್ಟುವಂತಿಲ್ಲ ಎಂದು ಸೂಚನೆ ನೀಡಿದೆ.

ಅನುತ್ತೀರ್ಣರಾದ ಹಾಗೂ ಫಲಿತಾಂಶ ವೃದ್ದಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸದೆ ಎರಡು ಮತ್ತು ಮೂರನೇ ಪರೀಕ್ಷೆ ಬರೆಯಬಹುದಾಗಿದೆ.

ಪಿಯು ಪರೀಕ್ಷೆ -2 ಏಪ್ರಿಲ್ 24 ರಿಂದ ಮೇ 8ರ ವರೆಗೆ ಮತ್ತು ಪರೀಕ್ಷೆ - 3 ಜೂನ್ 9 ರಿಂದ 21ರ ವರೆಗೆ ನಡೆಯಲಿದೆ. ವಿದ್ಯಾರ್ಥಿಗಳು ಶುಲ್ಕ ಪಾವತಿಸದೇ ಏ. 9 ರಿಂದ ಏ.17 ರ ಒಳಗಾಗಿ ಆಯಾ ಕಾಲೇಜುಗಳಲ್ಲಿ ಹೆಸರು ನೋಂದಾಯಿಸಿಕೊಂಡು ಪರೀಕ್ಷೆ ಬರೆಯಬಹುದು ಎಂದು ಇಲಾಖೆ ತಿಳಿಸಿದೆ.