ಗ್ರಾಪಂ ಸದಸ್ಯನ ಗೂಂಡಾ ವರ್ತನೆ: ಸಾರ್ವಜನಿಕವಾಗಿ ಗುಂಡು ಹಾರಿಸಿ ಹುಟ್ಟುಹಬ್ಬ ಆಚರಣೆ.
ಕ್ರೈಮ್ಜಿಲ್ಲಾ ಸುದ್ದಿ


ಬೆಳಗಾವಿ : ಬೆಳಗಾವಿಯಲ್ಲಿ ಗ್ರಾಮ ಪಂಚಾಯತಿ ಸದಸ್ಯನೊಬ್ಬ ಗೂಂಡಾ ವರ್ತನೆ ತೋರಿಸಿದ್ದು, ಬಂದೂಕಿನಿಂದ ಗುಂಡು ಹಾರಿಸಿ ತನ್ನ ಹುಟ್ಟು ಹಬ್ಬ ಆಚರಣೆ ಮಾಡಿಕೊಂಡಿದ್ದಾನೆ. ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ ಗ್ರಾಮ ಪಂಚಾಯಿತಿ ಸದಸ್ಯನನ್ನು ಅರೆಸ್ಟ್ ಮಾಡಲಾಗಿದೆ.
ಪಂಚಾಯತ್ ಸದಸ್ಯ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡನಾಗಿರುವ ಬಾಬಾಜಾನ್ ಖಾಲಿಮುಂಡಾಸೈ ಆರೋಪಿ. ಈತ ತನ್ನ ಹುಟ್ಟುಹಬ್ಬದ ದಿನದಂದು ಸಂಭ್ರಮಾಚರಣೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದಷ್ಟೇ ಅಲ್ಲದೇ , ಮಾರಕಾಸ್ತ್ರಗಳನ್ನು ಹಿಡಿದು ಫೋಟೋಗೆ ಪೋಸ್ ಕೊಟ್ಟಿದ್ದ.
ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬಳಿಕ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಸಧ್ಯ ಬಾಬಾಜಾನ್ ನನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.