HEART ATTACK :ನಿನ್ನೆ ಒಂದೇ ದಿನ ಹೃದಯಾಘಾತಕ್ಕೆ ಆರು ಬಲಿ.!
ಜಿಲ್ಲಾ ಸುದ್ದಿ


ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ, ಇದೀಗ ಮಂಗಳವಾರ ಒಂದೇ ದಿನ 24 ಗಂಟೆಗಳಲ್ಲಿ ಹೃದಯಾಘಾತಕ್ಕೆ ಆರು ಜನ ಸಾವನ್ನಪ್ಪಿದ್ದರೆ, ಈ ಪೈಕಿ ಹಾಸನದಲ್ಲಿ ಮೂವರು, ಧಾರವಾಡ ಜಿಲ್ಲೆಯಲ್ಲಿ ಇಬ್ಬರು, ಶಿವಮೊಗ್ಗ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ.
ಮದುವೆಯಾದ ಎರಡೇ ತಿಂಗಳಿಗೆ ಯುವಕ ಸಾವು!
ಹಾಸನ ಜಿಲ್ಲೆಯ ಸೋಮನಹಳ್ಳಿಯ ಸಂಜಯ್ (25) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಿನ್ನೆ ಸಂಜೆ ಎದೆನೋವು ಎಂದು ಆಸ್ಪತ್ರೆಗೆ ಹೋಗಿದ್ದರು.ಸೋಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ನಡೆಸಿದ್ದರು. ನಂತರ ಬೇರೆ ಆಸ್ಪತ್ರೆಗೆ ಹೋಗುವಾಗ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾರೆ. ಸಂಜಯ್ ಕಳೆದ ಎರಡು ತಿಂಗಳ ಹಿಂದೆ ಅಷ್ಟೇ ಮದುವೆಯಾಗಿತ್ತು ಇದೀಗ ಇವರ ಸಾವಿನಿಂದ ಕುಟುಂಬಸ್ಥರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಒಂದುವರೆ ತಿಂಗಳ ಬಾಣಂತಿ ಬಲಿ!
ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಒಂದೂವರೆ ತಿಂಗಳ ಬಾಣಂತಿ ಸಾವನನಪ್ಪಿದ್ದಾರೆ. ಬಾಣಂತನಕ್ಕೆ ಆಯನೂರು ಗ್ರಾಮದ ತವರು ಮನೆಯಲ್ಲಿದ್ದ ಹರ್ಷಿತಾ (22) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಬಾಣಂತಕ್ಕೆ ಹರ್ಷಿತಾ ಶಿವಮೊಗ್ಗ ಜಿಲ್ಲೆಯ ಆಯನೂರು ಗ್ರಾಮದ ತವರು ಮನೆಯಲ್ಲಿ ಇದ್ದರು. ಇವರು ಹಾಸನದ ಕೊಮ್ಮೇನಹಳ್ಳಿಯ ನಿವಾಸಿಯಾಗಿದ್ದು, ಹೆರಿಗೆ ಬಳಿಕ ತವರಿಗೆ ತೆರಳಿದ್ದರು. ಮೊನ್ನೆ ರಾತ್ರಿ ಹರ್ಷಿತಾಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೊಮ್ಮೇನಹಳ್ಳಿ ಗ್ರಾಮದಿಂದ ಹರ್ಷಿತಾ ತಮ್ಮ ಪತಿಯನ್ನು ಕರೆಸಿಕೊಂಡಿದ್ದಾರೆ. ಆದರೆ ನಿನ್ನೆ ಬೆಳಗ್ಗೆ ಆಸ್ಪತ್ರೆಗೆ ಕರೆದೋಯ್ಯುವಾಗಲೇ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.
ದಕ್ಷಿಣಕನ್ನಡದಲ್ಲಿ ಹೃದಯಘಾತಕ್ಕೆ ವ್ಯಕ್ತಿ ಸಾವು!
ಇನ್ನು ದಕ್ಷಿಣಕನ್ನಡ ಜಿಲ್ಲೆಯ ಗಂಪದಕೋಡಿಯ ವಜ್ರಾಕ್ಷ ಪೂಜಾರಿ (53) ಎನ್ನುವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಪದಕೋಡಿ ಗ್ರಾಮದ ನಿವಾಸಿಯಾಗಿದ್ದಾರೆ. ನಿನ್ನೆ ರಾತ್ರಿ ವಜ್ರಾಕ್ಷ ಪೂಜಾರಿ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಶಿವಮೊಗ್ಗದಲ್ಲಿ ಸರ್ಕಾರಿ ವೈದ್ಯ ಹೃದಯಘಾತಕ್ಕೆ ಬಲಿ!
ಅದೇ ರೀತಿ ಶಿವಮೊಗ್ಗದಲ್ಲಿ ಹೃದಯಘಾತಕ್ಕೆ ಸರ್ಕಾರಿ ವೈದ್ಯ ಬಲಿಯಾಗಿದ್ದಾರೆ. ಹೃದಯಘಾತದಿಂದ ಸರ್ಕಾರಿ ವೈದ್ಯ ಸಂದೀಪ್ (48) ಇದೀಗ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನಲ್ಲಿ ಈ ಘಟನೆ ನಡೆದಿದೆ. ಸಂದೀಪ್ ಹೊಳೆಹೊನ್ನೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯರಾಗಿ 8 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಇದೀಗ ಹೃದಯಘಾತದಿಂದ ಸಂದೀಪ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮಾತ್ರೆ ಸೇವಿಸುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು!
ಚಿಕ್ಕಮಂಗಳೂರಿನಲ್ಲೂ ಕೂಡ ಹೃದಯಾಘಾತ ಆತಂಕ ಸೃಷ್ಟಿಸಿದ್ದು, ಮೆಡಿಕಲ್ ನಲ್ಲಿ ಮಾತ್ರೆ ಖರೀದಿಸುವಾಗಲೇ ವ್ಯಕ್ತಿಯೊಬ್ಬರಿಗೆ ಹೃದಯಘಾತವಾಗಿದೆ. ಮಾತ್ರೆ ಸೇವಿಸಲು ನೀರು ಕೇಳುತ್ತಿದ್ದಂತೆ ವ್ಯಕ್ತಿ ಕುಸಿದು ಬಿದ್ದು ಸಾವನಪ್ಪಿದ್ದಾರೆ. ಮೃತರು ಕೋಟೆ ಬಡಾವಣೆಯ ವಿಶ್ವನಾಥ್ (50) ಎಂದು ತಿಳಿದುಬಂದಿದೆ.
ವಿಶ್ವನಾಥ್ ಅವರು ಕುಸಿದು ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಳೆದ ಜೂನ್ 26ರಂದು ದೀಪ ನರಸಿಂಗ್ ಹೋಂ ಬಳಿ ಈ ಒಂದು ಘಟನೆ ನಡೆದಿತ್ತು. ಹೃದಯಾಘಾರದಿಂದ ಸಾವನ್ನಪ್ಪಿದ್ದಾರೆ ಎಂದು ವೈದರು ಕೂಡ ದೃಢಪಡಿಸಿದ್ದಾರೆ. ಚಿಕ್ಕಮಗಳೂರಲ್ಲಿ ಎರಡು ತಿಂಗಳಲ್ಲಿ ಒಟ್ಟು 13 ಜನ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಬಿಜೆಪಿ ಯುವ ಮುಖಂಡ ಸಾವು!
ತುಮಕೂರು ಜಿಲ್ಲೆಯ ಊರುಕೆರೆ ಬಿಜೆಪಿ ಗ್ರಾ.ಪಂ ಮಾಜಿ ಅಧ್ಯಕ್ಷ ಹೆಬ್ಬಾಕ ಸ್ವಾಮಿ (36) ಅವರು ಮಗಳನ್ನು ಶಾಲೆಗೆ ಬಿಟ್ಟು ವಾಪಸ್ಸು ಮನೆಗೆ ಬಂದ ಕೆಲವೇ ಕ್ಷಣಗಳಲ್ಲಿ ತಲೆಸುತ್ತು ಬಂದು ಬಿದ್ದಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ರಾಜ್ಯ ಸರ್ಕಾರ ಕೂಡ ಹೃದಯಾಘಾತಕ್ಕೆ ಏನು ಕಾರಣ ಎಂದು ಈಗಾಗಲೇ ಆರೋಗ್ಯ ಇಲಾಖೆ ಒಂದು ಕಮಿಟಿ ಸಹ ರಚನೆ ಮಾಡಿದೆ. ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಒಟ್ಟು ಆರು ಜನರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಅಧ್ಯಯನ ನಡೆಸಿ 10 ದಿನಗಳಲ್ಲಿ ವರದಿಗೆ ಸೂಚನೆ
ಇತ್ತಿಚೆಗೆ ಹೃದಯಾಘಾತಗಳು ಹೆಚ್ಚಾಗುತ್ತಿರುವ ಹಿನ್ನೆ ಹೃದಯಘಾತಕ್ಕೆ ಲೆಯಲ್ಲಿ ಹೃದಯಾಘಾತಗಳನ್ನು ಅಧಿಸೂಚಿತ ಕಾಯಿಲೆ ಎಂದು ಪರಿಗಣಿಸುವ ಕುರಿತಂತೆ ಹಾಸನ ಪ್ರಕರಣಗಳ ವರದಿ ಬಂದ ಬಳಿಕ ಚರ್ಚೆ ನಡೆಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು ಸುದ್ದಿಗೋಷ್ಟಿಯಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ತಜ್ಞರ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಹಾಸನ ಜಿಲ್ಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ 18 ಹೃದಯಾಘಾತಗಳು ಸಂಭವಿಸಿವೆ. ಈ ಬಗ್ಗೆ ಹಾಸನ ಆರೋಗ್ಯ ಅಧಿಕಾರಿಗಳ ಜೊತೆ ಸಂಪರ್ಕಿಸಿ, ಹೃದಯಾಘಾತಗಳ ಬಗ್ಗೆ ವರದಿ ನೀಡುವಂತೆ ತಜ್ಞರ ಸಮಿತಿಗೆ ತಿಳಿಸಲಾಗಿದೆ. ಜಯದೇವ ಎದೆರೋಗ ಸಂಸ್ಥೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಈಗಾಗಲೇ ಕೋವಿಡ್ ಅಡ್ಡ ಪರಿಣಾಮದಿಂದ ಆಗಿರುವ ಸಾವುಗಳು, ಹೃದಯಾಘಾತಗಳ ಕುರಿತಂತೆ ಸಂಶೋಧನೆ ನಡೆಸಿ ವರದಿ ನೀಡಲು ಸಮಿತಿ ರಚಿಸಲಾಗಿತ್ತು. ಇದೀಗ ಹಾಸನ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ಇದೇ ಸಮಿತಿಗೆ ಜವಾವ್ದಾರಿ ವಹಿಸಲಾಗಿದೆ. 10 ದಿನಗಳ ಒಳಗಾಗಿ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು.