ಕಾಡುಗೋಡಿಯಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ!
ಸ್ಥಳೀಯ ಸುದ್ದಿಕ್ರೈಮ್


ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಒಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕಾಡುಗೋಡಿಯ ವಿಜಯಲಕ್ಷ್ಮಿ ಕಾಲೋನಿಯಲ್ಲಿ ಈ ಕೊಲೆ ನಡೆದಿದೆ.
ಬೆಂಗಳೂರು: ಬೆಂಗಳೂರಿನ ಕಾಡುಗೋಡಿಯ ವಿಜಯಲಕ್ಷ್ಮಿ ಕಾಲೋನಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್, ಪುನೀತ್ ಅಲಿಯಾಸ್ ನೇಪಾಳಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ನಿನ್ನೆ ರಾತ್ರಿ 9.45 ಗಂಟೆ ಸುಮಾರಿಗೆ ಶ್ರೀಕಾಂತ್ ಮತ್ತು ಆತನ ಸಹಚರರು ಮಾರಕಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಇನ್ನು ದಾಳಿಯಲ್ಲಿ ಪುನೀತ್ ಸ್ನೇಹಿತನಿಗೂ ಗಂಭೀರವಾದ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶ್ರೀಕಾಂತ್ ಹಾಗೂ ರೌಡಿಶೀಟರ್ ಪುನೀತ್ ನಡುವೆ ಆಗಾಗ ಕ್ಷುಲಕ ವಿಚಾರಕ್ಕೆ ಗಲಾಟೆ ನಡೆಯುತಿತ್ತು. ಶ್ರೀಕಾಂತ್‌ನನ್ನು ಕೊಲೆ ಮಾಡುವುದಾಗಿ ಪುನೀತ್ ಹೇಳಿಕೊಂಡು ಓಡಾಡುತ್ತಿದ್ದ. ಅದನ್ನೇ ಶ್ರೀಕಾಂತ್ ಮನಸ್ಸಿನಲ್ಲಿ ಇಟ್ಟುಕೊಂಡಿದ್ದ ಎನ್ನಲಾಗಿದೆ. ಮಂಗಳವಾರ ರಾತ್ರಿ ಕಾಡುಗೋಡಿಯ ವಿಜಲಕ್ಷ್ಮೀ ಲೇಔಟ್ ಬಳಿ ಪುನೀತ್ ಇರುವಾಗ ಬೈಕ್‌ನಲ್ಲಿ ಬಂದ ನಾಲ್ವರು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಘಟನೆ ಸಂಬಂದ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.