ಹೊಸಕೋಟೆ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಜಿಂಕೆ ಸಾವು
ಸ್ಥಳೀಯ ಸುದ್ದಿ


ಹೊಸಕೋಟೆ : ಅಪರಿಚಿತ ವಾಹನ ಡಿಕ್ಕಿ ಹೊಡೆದು ಕಣಿವೆ(ಜಿಂಕೆ)ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನಾ ತಾವರೆಕೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಜರುಗಿದೆ.
ಬೆಳಗಿನ ಜಾವ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದೆ. ಅಪಘಾತವಾಗಿ ಗಂಟೆಗಟ್ಟಲೆ ಕಳೆದರು ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ. ಅಪಘಾತವಾಗಿ ಗಂಟೆಗಟ್ಟಲೆ ಕಳೆದರು ಸ್ಥಳಕ್ಕೆ ಬಾರದ ಅಧಿಕಾರಿಗಳ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.
ರಾಷ್ಟ್ರೀಯ ಹೆದ್ದಾರಿ 75ರ ತಾವರೆಕೆರೆ ಬಲಿ ರಸ್ತೆ ದಾಟುವ ವೇಳೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದೆ. ಸುಮಾರು 10 ವರ್ಷ ವಯಸ್ಸುಳ್ಳ ಕಣಿವೆ ಈ ಭಾಗದಲ್ಲಿ ಮೊದಲ ಬಾರಿಗೆ ಕಂಡು ಬಂದಿದೆ.
ಘಟನೆ ನಡೆದ 4-5 ತಾಸು ನಂತರ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದೆ. ಹೊಸಕೋಟೆ ಸುತ್ತ ಮುತ್ತ ಭಾಗದಲ್ಲಿ ಕಣಿವೆ ಜಿಂಕೆ ಸೇರಿದಂತೆ ಇತರೆ ಕಾಡು ಪ್ರಾಣಿಗಳು ಕಂಡು ಬರುತ್ತದೆ. ಘಟನೆ ಕುರಿತು ಸ್ಥಳೀಯರಿಂದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.