Ramanavami: ತೂಬಗೆರೆ ಗುಟ್ಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ರಾಮನವಮಿ ಸಂಭ್ರಮ
ಸ್ಥಳೀಯ ಸುದ್ದಿ


ದೊಡ್ಡಬಳ್ಳಾಪುರ : ರಾಜ್ಯಾದ್ಯಂತ ಇಂದು ಶ್ರೀರಾಮ ನವಮಿ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ತಾಲೂಕಿನ ತೂಬಗೆರೆ ಗ್ರಾಮದ ಹೊರವಲಯದ ಶ್ರೀ ಗುಟ್ಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿಂದು ರಾಮನವಮಿ ಪ್ರಯುಕ್ತ ವಿಶೇಷ ಅಲಂಕಾರ ಮತ್ತು ಪೂಜಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ದೇವರಿಗೆ ಪಂಚಾಮೃತ ಅಭಿಷೇಕ, ಹನುಮಾನ್ ಚಾಲೀಸ್ ಪಠಣಗಳು ನಡೆದವು. ಹನುಮನ ದರ್ಶನಕ್ಕೆ ಆಗಮಿಸಿದ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೆ ಪಾನಕ ಕೋಸಂಬರಿ, ಮಜ್ಜಿಗೆ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಯುವ ಮುಖಂಡ ಉದಯ್ ಆರಾಧ್ಯ ಸೇರಿದಂತೆ ತೂಬಗೆರೆ ಮುಖಂಡರು, ಭಾಗಿಯಾಗಿದ್ದರು.


