ಬೆಳಗಾವಿಯಲ್ಲಿ ಹೆಂಡತಿ ಕಾಟಕ್ಕೆ ಬೆಸತ್ತು ಡೆತ್ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ.
ರಾಜ್ಯ


ಬೆಳಗಾವಿ: ಪತ್ನಿಯ ಕಾಟ ತಾಳದೆ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ನಗರದ ಅನಗೋಳದ ದುರ್ಗಾ ನಗರದ ಶಿವಶಕ್ತಿ ಕಾಲೋನಿಯಲ್ಲಿ ಶುಕ್ರವಾರ (ಮೇ 30) ನಡೆದಿದೆ.
ತನ್ನದೇ ಕಂಪ್ಯೂಟರ್ ಶಾಪ್ನಲ್ಲಿ ವೈಯರ್ದಿಂದ ನೇಣು ಬಿಗಿದುಕೊಂಡು ಸುನೀಲ್ ಮೂಲಿಮನಿ (33) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ನನ್ನ ಪತ್ನಿಯೇ ಕಾರಣ ಎಂದು ಇಂಗ್ಲಿಷ್ ನಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನಾಲ್ಕು ವರ್ಷದ ಹಿಂದೆ ಪೂಜಾ ಎಂಬುವವರನ್ನು ಸುನೀಲ್ ಮದುವೆಯಾಗಿದ್ದರು. ಮೂರು ವರ್ಷದ ಮಗು ಕೂಡ ಇದೆ. 'ನನ್ನ ಸಾವಿಗೆ ನನ್ನ ಪತ್ನಿಯೇ ಕಾರಣ' ಎಂದು ಸುನೀಲ್ ಡೆತ್ ನೋಟ್ ಬರೆದಿಟ್ಟಿದ್ದಾರೆ. ಸದ್ಯ ಮರಣೋತ್ತರ ಪರೀಕ್ಷೆಗೆ ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಮೃತದೇಹ ಶಿಫ್ಟ್ ಮಾಡಲಾಗಿದೆ.ಸದ್ಯ ಉದ್ಯಮಬಾಗ ಠಾಣೆಯಲ್ಲಿ 108 ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಾಗಿದೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಹೆಂಡತಿ ಕಾಟಕ್ಕೆ ಬೇಸತ್ತು ಟೆಕ್ಕಿ ಅತುಲ್ ಸುಭಾಷ್ ಪ್ರಕರಣ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದಾದ ನಂತರ ಪತ್ನಿ ಮತ್ತು ಮಾವನ ಕಾಟಕ್ಕೆ ಪೊಲೀಸ್ ಕಾನ್‌ಸ್ಟೇಬಲ್ ತಿಪ್ಪಣ್ಣ ಬೈಯ್ಯಪ್ಪನಹಳ್ಳಿಯಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಈಗ ಮತ್ತೋರ್ವ ಸಾವನ್ನಪ್ಪಿದ್ದಾನೆ.