ಪ್ರಾಣ ಹೋದರೂ ಕೊಟ್ಟ ಮಾತಿಗೆ ತಪ್ಪುವುದಿಲ್ಲ: ಪ್ರಧಾನಿ ಮೋದಿ


ಬಿಹಾರ: ಪ್ರಾಣ ಹೋದರೂ ಕೊಟ್ಟ ಮಾತಿಗೆ ಎಂದೂ ತಪ್ಪುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕರಟಕ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಹಲ್ಗಾಮ್ ದಾಳಿ ಬಳಿಕ ಉಗ್ರರಿರುವ ತಾಣಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದು ಮಾತು ಕೊಟ್ಟಿದ್ದೆವು ಅದರ ಪ್ರಕಾರವೇ ನಡೆದುಕೊಂಡಿದ್ದೇವೆ ಎಂದು ಹೇಳಿದರು.
ಮುಂಬರುವ ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ, ರೋಹ್ತಾಸ್ ಜಿಲ್ಲೆಯಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು., 'ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿನ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಭರವಸೆ ನೀಡಿದ್ದೆ, ಇದೀಗ ಭಯೋತ್ಪಾದಕರ ಕೇಂದ್ರ ಕಚೇರಿ ಧೂಳಿಪಟ ಮಾಡಿ ನಿಮ್ಮ ಮುಂದೆ ನಿಂತಿದ್ದೇನೆ' ಎಂದರು.
ಭಯೋತ್ಪಾದಕರು ಒಳನುಸುಳಲು ರಕ್ಷಣೆ ನೀಡುತ್ತಿದ್ದ ಪಾಕಿಸ್ತಾನ ಸೇನೆಗಳನ್ನು ನಮ್ಮ ಪಡೆಗಳು ನಾಶ ಮಾಡಿವೆ. ಕೆಲವೇ ನಿಮಿಷಗಳಲ್ಲಿ ಪಾಕಿಸ್ತಾನದ ಹಲವಾರು ವಾಯುನೆಲೆಗಳು ಮತ್ತು ಭಯೋತ್ಪಾದಕರ ಅಡಗುತಾಣಗಳನ್ನು ನಾಶಪಡಿಸಲಾಯಿತು' ಎಂದು ಮೋದಿ ಹೇಳಿದರು.
ಭಾರತದ ಹೆಣ್ಣುಮಕ್ಕಳು ಧರಿಸುವ ಸಿಂಧೂರದ (ಸಿಂಧೂರ) ಶಕ್ತಿಯನ್ನು ಪಾಕಿಸ್ತಾನ ಮತ್ತು ಇಡೀ ಜಗತ್ತು ನೋಡಿದೆ. ಪಾಕಿಸ್ತಾನಿ ಸೈನ್ಯದ ರಕ್ಷಣೆಯಲ್ಲಿ ಭಯೋತ್ಪಾದಕರು ಸುರಕ್ಷಿತ ಭಾವನೆ ಹೊಂದಿದ್ದರು. ಆದರೆ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದ ಉಗ್ರರ ನೆಲೆಗಳನ್ನು ನಾಶಪಡಿಸಿವೆ. ಈ ಮೂಲಕ ನವ ಭಾರತ ಶಕ್ತಿ ಎಲ್ಲರಿಗೂ ಅರಿವಾಗಿದೆ' ಎಂದು ಮೋದಿ ಹೇಳಿದ್ದಾರೆ.
ಉಗ್ರರ ದಾಳಿ ಬಳಿಕ ಬಿಹಾರದ ನೆಲದಲ್ಲಿಯೇ ಉಗ್ರರನ್ನು ಹುಡುಕಿ ಕೊಂದು, ಅವರು ಕನಸಲ್ಲೂ ನೆನಸಿರದ ಶಿಕ್ಷೆ ನೀಡುತ್ತೇವೆ ಎಂದು ಮಾತು ಕೊಟ್ಟಿದ್ದೆ. ಈಗ ಆ ಮಾತು ಸತ್ಯವಾಗಿದೆ. ಮತ್ತೆ ನಾನು ಬಿಹಾರಕ್ಕೆ ಬಂದಿದ್ದೇನೆ ಎಂದರು.
ಪ್ರಧಾನಿ ಮೋದಿ ಅವರು ನಕ್ಸಲಿಸಂ ಅನ್ನು ಕೊನೆಗೊಳಿಸುವ ಬಗ್ಗೆಯೂ ಪ್ರಸ್ತಾಪಿಸಿದರು ಮತ್ತು ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ನರೇಂದ್ರ ಮೋದಿ ಅವರು ಶುಕ್ರವಾರ ಬಿಹಾರದ ಕರಕಟ್‌ನಲ್ಲಿ 48,520 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದರು. 50 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಲಾಗಿದೆ.