ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ,ಮಾಲಿನ್ಯ ತಡೆಗಟ್ಟಿ ಸುಸ್ಥಿರ ಪರಿಸರ ಸಂರಕ್ಷಣೆಗೆ ಸಹಕರಿಸಿ: ಲಿಂಬಾವಳಿ
ಸ್ಥಳೀಯ ಸುದ್ದಿ


ಮಹದೇವಪುರ: ಪ್ರತಿಯೊಬ್ಬರೂ ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಮೂಲಕ ಮಾಲಿನ್ಯ ತಡೆಗಟ್ಟಿ ಸುಸ್ಥಿರ ಪರಿಸರ ಸಂರಕ್ಷಣೆಗೆ ಸಹಕರಿಸಬೇಕು ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.
ಮಹದೇವಪುರ ಕ್ಷೇತ್ರದ ಕಾಟಂನಲ್ಲೂರಿನ ಸಮೃದ್ಧಿ ಮಿನಿ ಹಾಲ್‌ನಲ್ಲಿ ರೆಸಿಡೆಂಟ್ಸ್' ವೆಲ್ಫೇರ್ ಅಸೋಸಿಯೇಷನ್ ರವರ ವತಿಯಿಂದ ಗಣೇಶ ಹಬ್ಬದ ಪ್ರಯುಕ್ತ ಮಕ್ಕಳಿಂದ ಗಣೇಶ ವಿಗ್ರಹ ತಯಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು
ನೈಸರ್ಗಿಕವಾದ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಪರಿಸರ ಸಂರಕ್ಷಣೆಗೆ ನಾವೆಲ್ಲರೂ ಮುಂದಾಗಬೇಕು. ಗಣೇಶ ಚತುರ್ಥಿ ಸಂದರ್ಭದಲ್ಲಿ ಪಿಒಪಿ ಗಣೇಶ ಮೂರ್ತಿ ತಯಾರಿಕೆ ಹಾಗೂ ಮಾಲಿನ್ಯಕಾರಿ ರಾಸಾಯನಿಕ ಬಣ್ಣ ಬಳಸಿ ತಯಾರಿಸಲಾದ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡದೆ, ಪ್ರತಿಯೊಬ್ಬರೂ ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಮೂಲಕ ಮಾಲಿನ್ಯ ತಡೆಗಟ್ಟಿ ಸುಸ್ಥಿರ ಪರಿಸರ ಸಂರಕ್ಷಣೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಮಾಲಿನ್ಕಾರಕ ರಾಸಾಯನಿಕ ಮೂರ್ತಿಗಳನ್ನು ನೀರಿನಲ್ಲಿ ವಿಸರ್ಜಿಸಿದರೆ ಜಲಚರಗಳಿಗೆ ತೊಂದರೆಯಾಗುತ್ತದೆ. ಜಾನುವಾರುಗಳಿಗೂ ಸಮಸ್ಯೆ ಉಂಟಾಗುತ್ತದೆ.ನೀರು ಮಾಲಿನ್ಯ ವಾಗುತ್ತೆ, ಅಪಾಯಕಾರಿ ಬಣ್ಣ ಮತ್ತು ನೀರಿನಲ್ಲಿ ಕರಗರದ ಪಿಒಪಿ ಬಳಸಿ ತಯಾರಿಸುವ ಮೂರ್ತಿಗಳನ್ನು ಯಾರೂ ಪ್ರತಿಷ್ಠಾಪನೆ ಮಾಡಬಾರದು ಎಂದು ಈ ಕಾರ್ಯಕ್ರಮದ ಮೂಲಕ ತಿಳಿಸಿದರು.
ಈ ವೇಳೆ ಪುಟ್ಟ ಪುಟ್ಟ ಕೈಗಳಲ್ಲಿ ವಿವಿಧ ಆಕಾರದ ಗಣೇಶನ ಮೂರ್ತಿಗಳನ್ನು ತಯಾರಿಸಿದನ್ನ ವೀಕ್ಷಿಸಿ ಖುಷಿ ಪಟ್ಟರು.
ಈ ಸಂದರ್ಭದಲ್ಲಿ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಹೆಚ್. ಎಸ್. ಪಿಳ್ಳಪ್ಪ, ಗ್ರಾಮಾಂತರ ಮಂಡಲದ RWA ಅಧ್ಯಕ್ಷರಾದ ಮಂಜುನಾಥ್ ಪಾಟೀಲ್, ಹಿರಿಯ ಮುಖಂಡರಾದ ಪಾಪಣ್ಣ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.