ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಸ್ಥಳೀಯ ಸುದ್ದಿ


ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ 2024-25ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಇಲಾಖಾ ವೆಬ್ ಸೈಟ್ www.twd.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಸಲ್ಲಿಸಿದ ಅರ್ಜಿಯನ್ನು ಕಡ್ಡಾಯವಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ: 205, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು ಈ ಕಛೇರಿಗೆ ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂ.ಸಂಖ್ಯೆ: 080-29787448 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾ ಭಾರತ್ ನ್ಯೂಸ್ ವೆಬ್ ಪೋರ್ಟಲ್ ವಾಟ್ಸಪ್ ಗ್ರೂಪ್ ಸೇರಲು 👇👇Follow this link to join my WhatsApp group : https://chat.whatsapp.com/Fj6L4Eak7N994zl2QHSpHK