ಕಲಬುರ್ಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್‌ನ ಬರ್ಬರ ಹತ್ಯೆ.

ಜಿಲ್ಲಾ ಸುದ್ದಿಕ್ರೈಮ್

ಧರ್ಮ ಬಸವನಪುರ

6/11/20251 min read

ಕಲಬುರ್ಗಿ: ರೌಡಿ ಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಆಳಂದ‌ ತಾಲ್ಲೂಕಿನ ಸಾವಳೇಶ್ವರ ಕ್ರಾಸ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.

ಸುಧಾಕರ್‌ (32) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಮಂಗಳವಾರ ತಡರಾತ್ರಿ ಸಹೋದರನ ಜೊತೆ ಬೈಕ್ ನಲ್ಲಿ ತೆರಳುವಾಗ ದುಷ್ಕರ್ಮಿಗಳು ದಾಳಿ ನಡೆಸಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ಪೋಲೀಸರು ತಿಳಿಸಿದ್ದಾರೆ.

ಈ ಘಟನೆಯಲ್ಲಿ ಸುಧಾಕರ್ ನ ಸಹೋದರನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹಳೆ ವೈಷಮ್ಯದ ಹಿನ್ನೆಲೆ ಕೊಲೆ ಮಾಡಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.ಘಟನಾ ಸ್ಥಳಕ್ಕೆ ಆಳಂದ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.