ಕೋಲಾರ: ಕೋಲಾರದಲ್ಲಿ ಎಂಟಿಎಂಗೆ ಕನ್ನ: 27 ಲಕ್ಷ ರೂಪಾಯಿ ದೋಚಿ ಪರಾರಿ.
ಕ್ರೈಮ್ಜಿಲ್ಲಾ ಸುದ್ದಿ


ಕೋಲಾರ: ರಾಜ್ಯದಲ್ಲಿ ಮತ್ತೊಂದು ATM ಕಳ್ಳತನ ವರದಿಯಾಗಿದ್ದು, ಎಟಿಎಂಗೆ ನುಗ್ಗಿದ ದುಷ್ಕರ್ಮಿಗಳು, 27 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದಾರೆ.
ಕೋಲಾರದ ಗುಲ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಗಿನ ಜಾವ 4.30 ರ ಸುಮಾರಿಗೆ ಈ ಘಟನೆ ನಡೆದಿದ್ದು,ಭದ್ರತಾ ಸಿಬ್ಬಂದಿ ಇಲ್ಲದ ಎಸ್‌ಬಿಐ ಎಟಿಎಂ ಗೆ ನುಗ್ಗಿದ ಕೆಲವು ಅಪರಿಚಿತ ದುಷ್ಕರ್ಮಿಗಳು 27 ಲಕ್ಷ ರೂ.ಗೂ ಹೆಚ್ಚು ಹಣವನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ಯಾಸ್ ಕಟ್ಟರ್‌ಗಳನ್ನು ಬಳಸಿ, ಕಳ್ಳರು ಎಟಿಎಂ ಯಂತ್ರವನ್ನು ಒಡೆದು 27.62 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದಾರೆ ಎಂದು ಕೋಲಾರ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ತಿಳಿಸಿದ್ದಾರೆ.
ಕಳ್ಳತನದ ವಿಷಯ ಗೊತ್ತಾಗುತ್ತಿದ್ದಂತೆಯೇ ಸ್ಥಳಕ್ಕೆ ಕೋಲಾರ ಎಸ್ಪಿ ನಿಖಿಲ್ ಸೇರಿದಂತೆ ಬೆರಳಚ್ವು ತಜ್ಞರು, ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.