ಕೆ.ಆರ್.ಪುರ: ಉಚಿತ ಆರೋಗ್ಯ ಶಿಬಿರಗಳನ್ನ ಸದುಪಯೋಗ ಪಡೆದು ಆರೋಗ್ಯ ಕಾಪಾಡಿಕೊಳ್ಳಿ: ಬೈರತಿ ಬಸವರಾಜ್
ಸ್ಥಳೀಯ ಸುದ್ದಿ


ಕೆ.ಆರ್.ಪುರ: ಶಾಂತಕೃಷ್ಣಮೂರ್ತಿ ಫೌಂಡೇಷನ್ ವತಿಯಿಂದ ಪ್ರಧಾನಿ ನರೇಂದ್ರ ಅವರ ಹುಟ್ಟುಹಬ್ಬದ ಅಂಗವಾಗಿ ಏರ್ಪಡಿಸಿದ್ದ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶಾಸಕ ಬೈರತಿ ಬಸವರಾಜ ಅವರು ಉದ್ಘಾಟಿಸಿದರು.
ರಾಮಮೂರ್ತಿ ನಗರದ ಎನ್ ಆರ್ ಐ ಬಡಾವಣೆ ಶಾಂತಕೃಷ್ಣಮೂರ್ತಿಯವರ ಕಛೇರಿಯಲ್ಲಿ ಆಯೋಜಿಸಿದ್ದ ಆರೋಗ್ಯ ಶಿಬಿರ ಉದ್ಘಾಟಿಸಿ ಮಾತನಾಡಿದ ಶಾಸಕ ಬೈರತಿ ಬಸವರಾಜ ಅವರು ರಕ್ತದಾನ ಒಂದು ಪವಿತ್ರವಾದ ದಾನವಾಗಿದೆ. ಇದರಿಂದ ಒಂದು ಜೀವವನ್ನು ಉಳಿಸಬಹು ದಾಗಿದೆ. ತುರ್ತು ಸಂದರ್ಭದಲ್ಲಿ ರಕ್ತ ಅಮೂಲ್ಯ ಪಾತ್ರ ವಹಿಸುತ್ತದೆ ಎಂದರು.
ಇತ್ತೀಚೆಗೆ ಅತಿಹೆಚ್ಚು ಆರೋಗ್ಯ ಸಮಸ್ಯೆಗಳು ಕಾಡುತ್ತಿರುವ ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಹೆಚ್ಚಾಗಿದ್ದು,ಪ್ರತಿಯೊಬ್ಬರು ರಕ್ತದಾನ ಮಾಡುವಂತೆ ಮನವಿ ಮಾಡಿದರು.
ಬಿಪಿ,ಶುಗರ್,ಹೃದಯಸಂಬಂಧಿ ರೋಗಗಳಿಗೆ ಉಚಿತ ಆರೋಗ್ಯ ತಪಾಸಣೆ ಏರ್ಪಡಿಸಲಾಗಿದ್ದು,ಪ್ರತಿಯೊಬ್ಬರು ಆರೋಗ್ಯ ತಪಾಸಣೆಯ ಸದುಪಯೋಗ ಪಡಿಸಿಕೊಳ್ಳಲು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ ಸಹ ಮಾಡಲಾಯಿತು, ಪೌರಕಾರ್ಮಿಕರು ನಗರ ಸ್ವಚ್ಚತೆ ಮಾಡುವ ಜೋತೆಗೆ ನಮ್ಮ ಆರೋಗ್ಯ ಕಾಪಾಡಿಕೊಳ್ಳುವ ಕಾರ್ಯ ಮಾಡುತ್ತಾರೆ ಎಂದು ಶ್ಲಾಘಿಸಿದರು.
ಸಾರ್ವಜನಿಕರಲ್ಲಿ ಸಣ್ಣ ಪುಟ್ಟ ರೋಗ ಲಕ್ಷಣಗಳು ಕಂಡು ಬಂದಲ್ಲಿ ಸಮಸ್ಯೆಯ ಪ್ರಾಥಮಿಕ ಹಂತದಲ್ಲೇ ವೈದ್ಯರನ್ನು ಕಾಣಬೇಕು. ಜನರಿಗಾಗಿಯೇ ಇಂತಹ ಆರೋಗ್ಯ ಉಚಿತ ತಪಾಸಣೆ ಶಿಬಿರ ಆಯೋಜಿಸಿದ್ದು, ರೋಗ ಲಕ್ಷಣ ಇರುವವವರು ಭಯ ಪಡದೇ ಇಂತಹ ಶಿಬಿರಗಳ ಸದುಪಯೋಗ ಪಡೆದು ಆರೋಗ್ಯವಂತರಾಗಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಆಯೋಜಕರಾದ ಶಾಂತಕೃಷ್ಣಮೂರ್ತಿ,ಮಂಡಲ ಅಧ್ಯಕ್ಷ ಮುನೇಗೌಡ, ಮಹಿಳಾ ಅಧ್ಯಕ್ಷೆ ಗೌರಮ್ಮ,ಪ್ರಧಾನ ಕಾರ್ಯದರ್ಶಿಗಳಾದ ಲೋಕೆಶ್,ಶ್ರೀರಾಮ್,ವಾರ್ಡನ ಅಧ್ಯಕ್ಷ ಗೊವಿಂದಪ್ಪ, ಮುಖಂಡರಾದ ಕೆ.ಮಾದೇಶಣ್ಣ,ಇದ್ದರು.