ಅಂಬೇಡ್ಕರ್ ನಗರ ಸರ್ಕಾರಿ ಶಾಲೆಯಲ್ಲಿ ಕಲಿಕಾ ಹಬ್ಬ
ಸ್ಥಳೀಯ ಸುದ್ದಿ


ಕೆ.ಆರ್.ಪುರ: ಓದಿನಲ್ಲಿ ಹಿಂದುಳಿದಿರುವ ಮಕ್ಕಳಿಗೆ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುವುದೇ ಕಲಿಕಾ ಹಬ್ಬದ ಕಾರ್ಯಕ್ರಮ ಎಂದು ಎಸ್‌ಡಿಎಂಸಿ ಅಧ್ಯಕ್ಷ ಹಿಟಾಚ್ಚಿ ಮಂಜುನಾಥ ತಿಳಿಸಿದರು.
ರಾಮಮೂರ್ತಿನಗರ ಅಂಬೇಡ್ಕರ್ ನಗರದ ಸರ್ಕಾರಿ ಹಿರಿಯಪ್ರಾಥಮಿಕ ಪಾಠಶಾಲೆಯಲ್ಲಿ ಹಮ್ಮಿಕೊಂಡಿದ್ದ ಕ್ಲಸ್ಟರ್ ಮಟ್ಟದ FLN ಚಟುವಟಿಕೆ ಆಧಾರಿತ ಮಕ್ಕಳಿಗೆ ಕಲಿಕಾ ಹಬ್ಬವನ್ನು ಗಣಿತ ಮೇಳವನ್ನುಉದ್ಘಾಟಿಸಿ ಅವರು ಮಾತನಾಡಿದರು.
ಕಲಿಕಾ ಹಬ್ಬ ಮಾಡಲು ಸರ್ಕಾರ ಹಾಗೂ ಶಿಕ್ಷಣ ಇಲಾಖೆ ತೀರ್ಮಾನ ಮಾಡಿದ್ದಾರೆ. ಗಟ್ಟಿಯಾಗಿ ಓದುವುದು, ಕಥೆಗಳನ್ನು ಓದಿಸುವುದು, ಸ್ವಾತಂತ್ರ್ಯವಾಗಿ ಬರೆಯುವುದು, ಸಂತೋಷದಯಕವಾಗಿ ಗಣಿತ ಕಳಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಸರ್ಕಾರಿ ಶಾಲೆಗಳಲ್ಲಿ ಎಲ್ಲಾ ತರಹದ ಮೂಲಸೌಕರ್ಯ ಒದಗಿಸಲಾಗುತ್ತಿದೆ. ಪೋಷಕರು ಹಾಗೂ ಶಿಕ್ಷಕರು ಉತ್ತಮ ಬಾಂಧವ್ಯ ಹೊಂದಿದರೆ ಶಾಲೆಯ ಅಭಿವೃದ್ಧಿ ಹಾಗೂ ಮಕ್ಕಳ ಜ್ಞಾನ ವೃದ್ಧಿಯಾಗುತ್ತದೆ. ಸರ್ಕಾರಿ ಶಾಲೆಗಳನ್ನು ಸಂರಕ್ಷಣೆ ಮಾಡುವುದರಿಂದ ಮಕ್ಕಳು ವಿದ್ಯೆಗಾಗಿ ವಲಸೆ ಹೋಗುವುದನ್ನು ತಪ್ಪಿಸಬೇಕು' ಎಂದರು.
ಮಕ್ಕಳ ಮನಸಿನಲ್ಲಿ ಕಲಿಕೆಯ ಆಸಕ್ತಿ ಬೆಳೆಸಬೇಕು, ಕಲಿಯುವಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ಆಸಕ್ತಿ ವಹಿಸಿ ಅವರಿಗೆ ಅರ್ಥವಾಗುವ ರೀತಿಯಲ್ಲಿ ಪಾಠ ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮವು ಒಂದರಿಂದ ಐದನೇ ತರಗತಿಯ ಮಕ್ಕಳಿಗೆ ಕಲಿಕೆಯಲ್ಲಿ ಹಿಂದುಳಿದಂತಹ ಮಕ್ಕಳಿಗೆ ವಿಶೇಷವಾಗಿ ಪ್ರೋತ್ಸಾಹ ನೀಡಿ, ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳನ್ನು ನೀಡಲಾಯಿತು.
ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ಪಾಠಶಾಲೆಯ ಮುಖ್ಯೋಪಧ್ಯಾಯರಾದ ಎನ್.ಡಿ. ವಿಜಯಲಕ್ಷ್ಮಿರವರು,ಸಿ ಆರ್ ಪಿ.ವಿಜಯಲಕ್ಷ್ಮಿರವರು, ಪರಮೇಶಯ್ಯ ರವರು, ವಿಶ್ವನಾಥ್ ರವರು,ಹರಿ ರವರು, ಜಗದೀಶ್ವರಿರವರು, ಮತ್ತು ರಾಮಮೂರ್ತಿನಗರ ಸುತ್ತಮುತ್ತಲಿನ ಕ್ಲಸ್ಟರ್ ನ ಎಲ್ಲಾ ಶಾಲೆಯ ಮುಖ್ಯ ಶಿಕ್ಷಕರು ಸಹ ಶಿಕ್ಷಕರು,ಪೋಷಕರು, ಮತ್ತು ಮಕ್ಕಳು ಭಾಗವಹಿಸಿದ್ದರು.