Loan Recovery:ಲೋನ್ ರಿಕವರಿಗೆ ಹೋದ ಬ್ಯಾಂಕ್ ಸಿಬ್ಬಂದಿ ಮೇಲೆ ಹಲ್ಲೆ
ಕ್ರೈಮ್


ಬೆಂಗಳೂರು : ಬ್ಯಾಂಕ್ ಸಾಲ ಕಟ್ಟದ ಹಿನ್ನೆಲೆ ಲೋನ್ ರಿಕವರಿಗೆಂದು ಹೋದ ಬ್ಯಾಂಕ್ ಸಿಬ್ಬಂದಿಯ ಮೇಲೆ ಕಲ್ಲೆಸೆತ ನಡೆಸಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ. ಚಂದನ್ ಎನ್ನುವ ಬ್ಯಾಂಕ್ ಸಿಬ್ಬಂದಿ ಮೇಲೆ ಕಲ್ಲೆಸೆತ ನಡೆಸಲಾಗಿದೆ. ಇವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅನ್ನಪೂರ್ಣೇಶ್ವರಿ ನಗರದ ರಮೇಶ್ ಎಂಬಾತ ಕಳೆದ ಎರಡು ತಿಂಗಳಿಂದ ಇಎಂಐ ಕಟ್ಟಿರಲಿಲ್ಲ. ಈ ಬಗ್ಗೆ ವಿಚಾರಿಸಲು ಫೋನ್ ಮಾಡಿದ್ರೆ ರಿಸೀವ್ ಮಾಡುತ್ತಿರಲಿಲ್ಲ. ಸಾಕಷ್ಟು ಪ್ರಯತ್ನತದ ನಂತರ ಕರೆ ಸ್ವೀಕರಿಸಿ ನಾಗರಬಾವಿಯ ಬಿಡಿಎ ಕಾಂಪ್ಲೆಕ್ಸ್ ಬಳಿ ಬರಲು ಬ್ಯಾಂಕ್ ಸಿಬ್ಬಂದಿಗೆ ತಿಳಿಸಿದ್ದ. ಬ್ಯಾಂಕ್ ಸಿಬ್ಬಂದಿ ಸ್ಥಳಕ್ಕೆ ಹೋದಾಗ ಲೋನ್ ವಿಚಾರವಾಗಿ ಇಬ್ಬರ ನಡುವೆ ಮಾತುನ ಚಕಮಕಿ ನಡೆದಿದೆ. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಆಗ ಅಲ್ಲಿಯೇ ಇದ್ದ ಕಲ್ಲನ್ನು ಬ್ಯಾಂಕ್ ಸಿಬ್ಬಂದಿ ಚಂದನ್ ಮೇಲೆ ಎಸೆದಿದ್ದಾನೆ. ಸುತ್ತಮುತ್ತಲಿನ ಜನ ಸೇರುತ್ತಾರೆ ಎನ್ನುವಾಗ ಅಲ್ಲಿಂದ ರಮೇಶ್ ಎಸ್ಕೇಪ್ ಆಗಿದ್ದಾನೆ.
ಚಂದನ್ ತಲೆಗೆ ಗಂಭೀರವಾದ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.