ಮಡಿಕೇರಿ: ಓದಲು ಇಷ್ಟವಿಲ್ಲ ಡೆತ್ ನೋಟ್ ಬರೆದಿಟ್ಟು ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಸೂಸೈಡ್!

ರಾಜ್ಯ

ಧರ್ಮ ಬಸವನಪುರ.

5/29/20251 min read

ಮಡಿಕೇರಿ: ನನಗೆ ಓದಲು ಇಷ್ಟವಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ರಾಯಚೂರು ಮೂಲದ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಪೊನ್ನಂಪೇಟೆಯಲ್ಲಿ ಜರುಗಿದೆ.

ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಸಿಐಟಿ)ಯಲ್ಲಿ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವತೇಜಸ್ವಿನಿ (19) ಎಂಬಾಕೆ ಆತ್ಮಹತ್ಯೆಗೆ ಶರಣಾದವಳಾಗಿದ್ದಾಳೆ.

ಮೃತಳು ರಾಯಚೂರಿನ ಮಹಾಂತಪ್ಪ ಎಂಬವರ ಏಕೈಕ ಪುತ್ರಿಯಾಗಿದ್ದು, ಮೂರು ದಿನಗಳ ಹಿಂದೆ ತನ್ನ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡು, ಅಂದಿನ ಕಾರ್ಯಕ್ರಮಕ್ಕೆ ಬಾರದ ಸ್ನೇಹಿತರಿಗೆ ಬುಧವಾರ ಕೂಡಾ ಸಿಹಿ ಹಂಚಿದ್ದರೆ ಎನ್ನಲಾಗಿದೆ. ಬುಧವಾರವೂ ತರಗತಿಗೆ ಆಗಮಿಸಿದ ಆಕೆ ಸಂಜೆ 4 ಗಂಟೆಗೆ ಹಾಸ್ಟೆಲ್ ಸೇರಿಕೊಂಡಿದ್ದಾಳೆ. 4.30 ಗಂಟೆಗೆ ಆಕೆಯ ಸಹಪಾಠಿ ಕೊಠಡಿಗೆ ಹೋದಾಗ ಬಾಗಿಲು ಒಳಗಿನಿಂದ ಹಾಕಿಕೊಂಡಿದ್ದಳು.

ಎಷ್ಟೇ ಕೂಗಿದರೂ ಆಕೆ ಬಾರದಿದ್ದಾಗ ಹಾಸ್ಟೆಲ್ ಮೇಲ್ವಿಚಾರಕರಿಗೆ ವಿಷಯ ತಿಳಿಸಿ, ಬಾಗಿಲು ತೆಗೆದು ನೋಡಿದಾಗ ತೇಜಸ್ವಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೋಚರಿಸಿದೆ.

ಸಾಯುವ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ. ಅದರಲ್ಲಿ ಆರು ವಿಷಯ ಬ್ಯಾಕ್‌ಲಾಗ್ ಇರುವ ಕಾರಣ ತನಗೆ ಮುಂದೆ ಓದಲು ಇಷ್ಟವಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ಎಂದು ಬರೆದಿರುವುದಾಗಿ ಹೇಳಲಾಗಿದೆ. ಪೊನ್ನಪೇಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.