ಮಹದೇವಪುರ: ಅಕ್ರಮವಾಗಿ ನೆಲಸಿರುವ ಬಾಂಗ್ಲಾ ಪ್ರಜೆಗಳ ಪತ್ತೆಹಚ್ಚಲು ಅಭಿಯಾನ.

ಸ್ಥಳೀಯ ಸುದ್ದಿದೇಶ/ವಿದೇಶ

ಧರ್ಮ ಬಸವನಪುರ.

7/11/20251 min read

ಮಹದೇವಪುರ: ಕ್ಷೇತ್ರದ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ಪ್ರಜೆಗಳನ್ನು ಪತ್ತೆಹಚ್ಚುವ ಉದ್ದೇಶದಿಂದ ಮಾಜಿ ಸಚಿವ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಮಹದೇವಪುರ ಬಿಜೆಪಿ ಕಾರ್ಯಕರ್ತರು ಕ್ಷೇತ್ರದ ವಿವಿಧ ಸ್ಥಳಗಳಲ್ಲಿ ನೆಲೆಸಿರುವವರನ್ನ ಗುರ್ತಿಸುವ ಅಭಿಯಾನ ಕೈಗೊಂಡಿದ್ದಾರೆ.

ಕ್ಷೇತ್ರದ ಬಳಗೆರೆ, ಗುಂಜೂರುಪಾಳ್ಯ, ಪಣತ್ತೂರು, ತೂಬರಹಳ್ಳಿ, ಸಿದ್ದಾಪುರ ಸೋರಹುಣಸೆ, ಮಾರತ್ತಹಳ್ಳಿ, ಬೆಳ್ಳಂದೂರು ಹಾಗೂ ವಿವಿಧ ಭಾಗಗಳ ಖಾಲಿ ಸ್ಥಳಗಳಲ್ಲಿ ಅಕ್ರಮವಾಗಿ ಶೇಡ್ ಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ಆಧಾರ್ ಕಾರ್ಡ್, ಮತದಾನದ ಗುರುತಿನ ಚೀಟಿ ಸೇರಿದಂತೆ ಕೆಲವು ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ನಂತರ ಮಾತನಾಡಿದ ಬಿಜೆಪಿ ರಾಜ್ಯ ಪರಿಷತ್ ಸದಸ್ಯ ಎಲ್.ರಾಜೇಶ್, ಮಹದೇವಪುರ ಕ್ಷೇತ್ರದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ಪ್ರಜೆಗಳನ್ನು ಗುರುತಿಸಿ ಅವರ ದೇಶಕ್ಕೆ ವಾಪಾಸ್ ಕಳಿಸಲು ಮಾಜಿ ಸಚಿವ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಆಂದೋಲನ ಕೈಗೊಂಡಿದ್ದೇವೆ. ಕ್ಷೇತ್ರದಲ್ಲಿ ಬಾಂಗ್ಲಾ ಪ್ರಜೆಗಳನ್ನು ಪತ್ತೆಹಚ್ಚುವ ಉದ್ದೇಶದಿಂದ ಪ್ರತ್ಯೇಕವಾಗಿ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದೆ ಎಂದರು.

ನಮ್ಮ ದೇಶದ ಸುರಕ್ಷತೆಯ ಭದ್ರತೆ ದೃಷ್ಟಿಯಿಂದ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ಪ್ರಜೆಗಳನ್ನು ಪತ್ತೆ ಹಚ್ಚಿ ಅವರ ದೇಶಕ್ಕೆ ವಾಪಸ್ ಕಳಿಸಲಾಗುವುದು ಮೂಲ ಉದ್ದೇಶವಾಗಿದೆ ಎಂದು ಹೇಳಿದರು.

ಕಡಿಮೆ ಸಂಬಳ ನೀಡುವ ಮೂಲಕ ಕೆಲವರು ನೂರಾರು ಬಾಂಗ್ಲಾ ಪ್ರಜೆಗಳಿಗೆ ಆಶ್ರಯ ನೀಡಿದ್ದಾರೆ. ಹಲವಾರು ಭಾಗಗಳಲ್ಲಿ ಖಾಲಿ ಜಾಗಗಳಲ್ಲಿ ಶೆಡ್ ನಿರ್ಮಿಸಿಕೊಂಡಿದ್ದಾರೆ, ಕ್ಷೇತ್ರದ ಅಕ್ರಮವಾಗಿ ನೆಲೆಸಿರುವ ಸ್ಥಳಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ನಡೆಸಿದ ವೇಳೆ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿಕೊಂಡಿರುವುದು ಕಂಡು ಬರುತ್ತಿದೆ. ಕೇಂದ್ರ ಸರ್ಕಾರ ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ಕಲೆ ಹಾಕಿ ವಾಪಾಸು ಕಳುಹಿಸಲು ಮುಂದಾಗಿದೆ.

ಕೇಂದ್ರ ಸರ್ಕಾರದ ಕಾರ್ಯಕ್ಕೆ ಕೈಜೋಡಿಸಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ಕಳಿಸುವ ಹೋರಾಟವನ್ನು ಮಾಜಿ ಸಚಿವ ಅರವಿಂದ ಲಿಂಬಾವಳಿರವರು ಕೈಗೊಂಡಿದ್ದು ಭಾನುವಾರ 13 ರಂದು ರಾಮಗೊಂಡನಹಳ್ಳಿಯ ಶಾಲಾ ಮೈದಾನದಲ್ಲಿ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಹಲವಾರು ರಾಜ್ಯ ನಾಯಕರು ಭಾಗವಹಿಸಲಿದ್ದಾರೆ ಎಂದರು.

ಈ ಸಂಧರ್ಭದಲ್ಲಿ ಬಿಜೆಪಿ ಬೆಂಗಳೂರು ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಮೋದಿ, ಮಾಜಿ ನಗರ ಮಂಡಲ ಅಧ್ಯಕ್ಷ ಮನೋಹರರೆಡ್ಡಿ, ನಗರ ಮಂಡಲ ಉಪಾಧ್ಯಕ್ಷ ಮಾರಪ್ಪ, ವಿ.ಪಿ.ರಕ್ಷಿತ್, ನಾಗೇಶ್, ಸತ್ಯ ಇತರರು ಇದ್ದರು.