ಮಹಿಳಾ ಪೊಲೀಸ್ ಠಾಣೆ ಆವರಣದಲ್ಲಿ ವಿದ್ಯುತ್ ಸ್ಪರ್ಶಿಸಿ ಸುಟ್ಟು ಕರಕಲಾದ ವ್ಯಕ್ತಿ
ಸ್ಥಳೀಯ ಸುದ್ದಿ


ದೊಡ್ಡಬಳ್ಳಾಪುರ: ನಗರದ ಮಹಿಳಾ ಪೊಲೀಸ್ ಠಾಣಾ ಆವರಣದಲ್ಲಿ ಇಂದು ಸಂಜೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.
ಮಹಿಳಾ ಪೊಲೀಸ್ ಠಾಣಾ ಪಕ್ಕದಲ್ಲೆ ನೂತನವಾಗಿ ಶೌಚಾಲಯ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಮೌಲ್ಡ್ ಕಾಮಗಾರಿ ವೇಳೆ ಕಬ್ಬಿಣದ ರಾಡೊಂದು ವಿದ್ಯುತ್ ಲೈನ್ ಗೆ ತಾಗಿ ಈ ಅವಘಡ ಸಂಭವಿಸಿದೆ. ಘಟನಯಲ್ಲಿ ಗಾಯಗೊಂಡ ವ್ಯಕ್ತಿಯ ಬಗ್ಗೆ ಸಂಪೂರ್ಣ ಮಾಹಿತಿ ಲಭ್ಯವಾಗಿಲ್ಲ, ವ್ಯಕ್ತಿಯ ದೇಹದ ಹಲವು ಭಾಗ ಸುಟ್ಟಿದ್ದು ಹೆಚ್ಚಿನ ಚಿಕಿತ್ಸೆಗಾಗಿ ನಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.