ದೊಡ್ಡಬಳ್ಳಾಪುರ: ಕಂಬಿ ಕೆಲಸ ಮಾಡುವಾಗ ವಿದ್ಯುತ್ ಸ್ಪರ್ಶ, ಪ್ರಾಣಾಪಾಯದಿಂದ ವ್ಯಕ್ತಿ ಪಾರು
ಸ್ಥಳೀಯ ಸುದ್ದಿ


ದೊಡ್ಡಬಳ್ಳಾಪುರ: ನಗರದ ಮಹಿಳಾ ಪೊಲೀಸ್ ಠಾಣಾ ಆವರಣದಲ್ಲಿ ಇಂದು ಸಂಜೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದ್ದು ಗಾಯಾಳು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಗಾಯಾಳುವನ್ನು ದೇವನಹಳ್ಳಿ ತಾಲ್ಲೂಕಿನ ಹೂವಿನಹಾಡಿ ಗ್ರಾಮದ ರಾಕೇಶ್ (35) ವರ್ಷ ಎಂದು ತಿಳಿದು ಬಂದಿದೆ. ಮಹಿಳಾ ಪೊಲೀಸ್ ಠಾಣಾ ಪಕ್ಕದಲ್ಲೆ ನೂತನವಾಗಿ ಶೌಚಾಲಯ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಮೌಲ್ಡಿಂಗ್ ಕಾಮಗಾರಿ ವೇಳೆ ಕಬ್ಬಿಣದ ರಾಡೊಂದು ವಿದ್ಯುತ್ ಲೈನ್ ಗೆ ತಾಗಿ ಈ ಅವಘಡ ಸಂಭವಿಸಿದೆ. ವ್ಯಕ್ತಿಯ ದೇಹದ ಬಲಭಾಗದಲ್ಲಿ ಸುಟ್ಟಿದ್ದು ಚಿಕಿತ್ಸೆಗಾಗಿ ನಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು, ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರು ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಗೆ ಗಾಯಾಳುವನ್ನು ರವಾನಿಸಲು ಸೂಚಿಸಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.