ಮಂಡ್ಯ: ತುಂಬು ಗರ್ಭೀಣಿ ಅನುಮಾನಾಸ್ಪದ ಸಾವು.
ಜಿಲ್ಲಾ ಸುದ್ದಿರಾಜ್ಯ


ಮಂಡ್ಯ: ತುಂಬು ಗರ್ಭಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಮದ್ದೂರು ಪಟ್ಟಣದಲ್ಲಿ ಶನಿವಾರ ಬೆಳಗಿನ ಜಾವ ಜರುಗಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಕಾಮಗೆರೆ ನಿವಾಸಿಗಳಾದ ಚಂದನ್ ಗೌಡ (24) ಹಾಗೂ ಆಶಾ (19) ಇಬ್ಬರು ಪ್ರೇಮಿಗಳು ಕಳೆದ ಒಂದುವರೆ ವರ್ಷದ ಹಿಂದೆ ಕುಟುಂಬದವರ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದರು.
ನಾಳೆ ಭಾನುವಾರ ಪತ್ನಿ ಆಶಾ ಗೆ ಸೀಮಂತ ಕಾರ್ಯಕ್ರಮವನ್ನು ಮಾಡಲು ತಯಾರಿ ಕೂಡ ನಡೆಸಲಾಗಿತ್ತು. ಆದರೆ, ವೇಲ್ ನಿಂದ ತುಂಬು ಗರ್ಭಿಣಿ ಪತ್ನಿಯ ಕುತ್ತಿಗೆಗೆ ಬಿಗಿದ ಸ್ಥಿತಿಯಲ್ಲಿ ಶವ ಕಂಡು ಬಂದಿದೆ.
ಬಳಿಕ ಪತಿ ಚಂದನ್ ಗೌಡ ತನ್ನ ಪತ್ನಿ ಕುಟುಂಬದವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೋಷಕರು ಪತಿ ಚಂದನ್ ಗೌಡ ವಿರುದ್ಧ ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಪೋಷಕರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಮದ್ದೂರು ಪೋಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಶವವನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.