ಮಂತ್ರಾಲಯ: : 20 ದಿನದಲ್ಲಿ ರಾಯರ ಹುಂಡಿಗೆ 3.73 ಕೋಟಿ ರೂ. ಸಂಗ್ರಹ
ಸ್ಥಳೀಯ ಸುದ್ದಿಜಿಲ್ಲಾ ಸುದ್ದಿ


ರಾಯಚೂರು: ಡಿಸೆಂಬರ್ ತಿಂಗಳಲ್ಲಿ ದೇಶದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಮಂತ್ರಾಲಯಕ್ಕೆ ಭೇಟಿ ನೀಡಿದ್ದು,ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಕಳೆದ 20 ದಿನಗಳಲ್ಲಿ ಭಕ್ತರಿಂದ 3.73 ಕೋಟಿ ರೂಪಾಯಿಗೂ ಅಧಿಕ ಕಾಣಿಕೆ ಸಂಗ್ರಹವಾಗಿದೆ.
₹3,62,69,247 ನಗದು, ₹10,97,340 ಮೊತ್ತದ ನಾಣ್ಯಗಳು ಸೇರಿ ₹.3,73,66,587 ನಗದು, 87 ಗ್ರಾಂ ಚಿನ್ನ ಹಾಗೂ, 910 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.
ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿಯ ಸದಸ್ಯರು ಹಾಗೂ ಕರಸೇವಕರು ಅತ್ಯಂತ ಶಿಸ್ತುಬದ್ಧವಾಗಿ ಹುಂಡಿ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ವರ್ಷದ ಕೊನೆಯ ತಿಂಗಳಲ್ಲಿ ಭಕ್ತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಮಂತ್ರಾಲಯದ ಇತಿಹಾಸದಲ್ಲಿ ಇದೊಂದು ಪ್ರಮುಖ ದಾಖಲೆಯಾಗಿದೆ.